ಕುಶಾಲನಗರ, ಸೆ. 6: ಯುವ ಬ್ರಿಗೇಡ್ ಕಾರ್ಯಕರ್ತರ ಸಂವಾದ ಕಾರ್ಯಕ್ರಮ ಕುಶಾಲನಗರದಲ್ಲಿ ನಡೆಯಿತು.

ಸ್ಥಳೀಯ ಹೊಟೇಲ್ ಸಭಾಂಗಣದಲ್ಲಿ ಯುವ ಬ್ರಿಗೇಡ್ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆ ಅಧ್ಯಕ್ಷತೆಯಲ್ಲಿ ನಡೆದ ಬೈಠಕ್‍ನಲ್ಲಿ ಯುವ ಬ್ರಿಗೇಡ್ ಮೂಲಕ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಕುರಿತು ಚರ್ಚೆ ನಡೆಯಿತು. ಪ್ರಕೃತಿ ವಿಕೋಪದ ಹಿನ್ನೆಲೆ ಕಳೆದೆರೆಡು ವರ್ಷಗಳಿಂದ ಬ್ರಿಗೇಡ್ ಮೂಲಕ ಹಮ್ಮಿಕೊಳ್ಳುತ್ತಿದ್ದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಸ್ಥಗಿತಗೊಂಡಿದೆ. 75ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ಮುಂದಿನ ವರ್ಷದ ಆಗಸ್ಟ್ ಒಳಗಾಗಿ 75 ವಿಭಿನ್ನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಕುರಿತು ಚರ್ಚೆಗಳು ನಡೆದವು. ಈ ಸಂದರ್ಭ ಯುವ ಬ್ರಿಗೇಡ್‍ನ ಪ್ರಮುಖರು, ಕಾರ್ಯಕರ್ತರು ಇದ್ದರು.