ಮಡಿಕೇರಿ: ನಗರದ ಜನರಲ್ ತಿಮ್ಮಯ್ಯ ಶಾಲೆಯ ಸಭಾಂಗಣ ದಲ್ಲಿ ಶಿಕ್ಷಕರ ದಿನವನ್ನು ಆಚರಿಸ ಲಾಯಿತು. ಈ ಸಂದರ್ಭ ಶಾಲೆಯ ಪ್ರಾಂಶುಪಾಲೆ ಬಿ.ಎಂ. ಸರಸ್ವತಿ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳು ವಂತೆ ಶಿಕ್ಷಕರಿಗೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಶಿಕ್ಷಕ ಕೆ.ಎನ್. ಭರತ್, ಪ್ರಮೀಳ ಜೀವನ್, ಪ್ರತಿಮಾ ಇವರುಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಪ್ರಾಂಶುಪಾಲರು, ಶಿಕ್ಷಕರು ಹಾಗೂ ಬೋಧಕೇತರ ವರ್ಗದವರು ಹಾಜರಿದ್ದರು.