ಸೋಮವಾರಪೇಟೆ, ಸೆ. 8: ಸೋಮವಾರಪೇಟೆ ತಾಲೂಕು ಪಂಚಾಯತ್ ವ್ಯಾಪ್ತಿಯ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ತಾ. 11ರಂದು ಪೂರ್ವಾಹ್ನ 11 ಗಂಟೆಗೆ ನಡೆಯಲಿದೆ.

ತಾ.ಪಂ. ಸಭಾಂಗಣದಲ್ಲಿ ನಡೆಯಲಿರುವ ಸಭೆಯ ಅಧ್ಯಕ್ಷತೆಯನ್ನು ತಾಲೂಕು ಪಂಚಾಯಿತಿ ಅಧ್ಯಕ್ಷೆ ಪುಷ್ಪಾ ರಾಜೇಶ್ ವಹಿಸಲಿದ್ದು, ಸಭೆಯಲ್ಲಿ 2020-21ನೇ ಸಾಲಿನ ಕ್ರಿಯಾ ಯೋಜನೆಗಳ ಬಗ್ಗೆ ಚರ್ಚೆ, 20-21ರ ಸಾಲಿನಲ್ಲಿ ಬಿಡುಗಡೆಯಾದ ಅನುದಾನ ಹಾಗೂ ವೆಚ್ಚಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.