ಸೋಮವಾರಪೇಟೆ, ಸೆ. 8: ತಾಲೂಕಿನ ಸಿದ್ಧಲಿಂಗಪುರ-ಅರಶಿನಗುಪ್ಪೆ ಗ್ರಾಮದಲ್ಲಿರುವ ಶ್ರೀಮಂಜುನಾಥ ಮತ್ತು ನವನಾಗ ಸನ್ನಿಧಿಯಲ್ಲಿ ಪಂಚಮಿ ಪೂಜೆ ಶ್ರದ್ಧಾಭಕ್ತಿಯಿಂದ ನೆರವೇರಿತು.

ಕ್ಷೇತ್ರದ ಪ್ರಧಾನ ಗುರುಗಳಾದ ಶ್ರೀರಾಜೇಶ್‍ನಾಥ್‍ಜೀ ಅವರ ಮಾರ್ಗದರ್ಶನದಲ್ಲಿ ಶ್ರೀ ಮಂಜುನಾಥ ಕ್ಷೇತ್ರದಲ್ಲಿ ಬೆಳಗ್ಗಿನಿಂದ ಗಣಪತಿ ಹೋಮ, ಅಭಿಷೇಕ, ಅಲಂಕಾರ ಪೂಜೆ, ಮಹಾಮಂಗಳಾರತಿ ನೆರವೇರಿತು.

ನಂತರ ನವನಾಗ ಸನ್ನಿಧಿಯಲ್ಲಿ ಪಂಚಮಿ ಪೂಜೆ, ವಿಶೇಷ ಅಲಂಕಾರ ಪೂಜೆ, ಮಹಾಮಂಗಳಾರತಿ ನಂತರ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು.

ಅರ್ಚಕ ಜಗದೀಶ್ ಉಡುಪ, ಮಯೂರ ಅವರುಗಳ ಪೌರೋಹಿತ್ವ ದಲ್ಲಿ ಪೂಜಾ ಕೈಂಕರ್ಯಗಳು ನಡೆದವು. ದೇವಾಲಯ ಜೀರ್ಣೋ ದ್ಧಾರ ಸಮಿತಿ ಅಧ್ಯಕ್ಷ ನಾಪಂಡ ಮುತ್ತಪ್ಪ, ಕಾರ್ಯದರ್ಶಿ ಪ್ರಕಾಶ್, ದೇವಾಲಯ ಸಮಿತಿ ಕಾರ್ಯದರ್ಶಿ ರಮೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.