ಕುಶಾಲನಗರ, ಸೆ. 8: 2019-20ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಕೂಡಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ಶೇ. 100 ರಷ್ಟು ಫಲಿತಾಂಶ ಪಡೆದಿದೆ. ವಸತಿ ಶಾಲೆಯ 47 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಇದರಲ್ಲಿ 45 ವಿದ್ಯಾರ್ಥಿಗಳು ಫಲಿತಾಂಶ ಬಂದಾಗ ಉತ್ತೀರ್ಣರಾಗಿದ್ದರು. 2 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದರು. ನಂತರ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದಾಗ ಎರಡು ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ಇದರಿಂದ ಕೂಡಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯು ಶೇ. 100 ರಷ್ಟು ಫಲಿತಾಂಶ ಪಡೆದಂತಾಗಿದೆ.