ಕೂಡಿಗೆ, ಸೆ. 8: ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿದ್ಧಲಿಂಗಪುರ ಗ್ರಾಮದ ಸರ್ವೆ ನಂಬರ್ 8/2 ರ 3.46 ಎಕರೆ ಪೈಸಾರಿ ಜಾಗದಲ್ಲಿದ್ದ ಕೆರೆಯ ಒತ್ತುವರಿಯನ್ನು ಸರ್ವೆ ನಡೆಸಿ ತೆರವುಗೊಳಿಸಲಾಯಿತು.
ಈ ಸಂದರ್ಭದಲ್ಲಿ ಕುಶಾಲನಗರ ನಾಡ ಕಚೇರಿಯ ಕಂದಾಯ ಪರಿವೀಕ್ಷಕ ಮಧುಸೂದನ್, ಗ್ರಾಮ ಲೆಕ್ಕಾಧಿಕಾರಿ ಸಚಿನ್ ಪೀರೋಜ್ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷ ಸೇರಿದಂತೆ ಸಿಬ್ಬಂದಿ ವರ್ಗದವರು ಹಾಜರಿದ್ದರು. ತೆರವುಗೊಳಿಸಿದ ನಂತರ ಗ್ರಾಮ ಪಂಚಾಯಿತಿಗೆ ಹಸ್ತಾಂತರ ಮಾಡಲಾಯಿತು.