ಕುಶಾಲನಗರ, ಸೆ. 8: ಯುವ ಬ್ರಿಗೇಡ್‍ನ ವತಿಯಿಂದ ಕುಶಾಲನಗರದ ಸೋಮೇಶ್ವರ ದೇವಾಲಯ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ದೇವಾಲಯದ ಆವರಣದಲ್ಲಿ ಬೆಳೆದು ನಿಂತಿದ್ದ ಕಾಡುಗಿಡಗಳನ್ನು ತೆರವುಗೊಳಿಸುವ ಕಾರ್ಯವನ್ನು ಬ್ರಿಗೇಡ್ ಕಾರ್ಯಕರ್ತರು ನಡೆಸಿದರು.

75ನೇ ವರ್ಷದ ಸ್ವಾತಂತ್ರ್ಯೋತ್ಸವದ ಆಚರಣೆಗೆಂದು ಈ ಬಾರಿ 75 ವಿಭಿನ್ನ ಬಗೆಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಬ್ರಿಗೇಡ್ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆ ಅವರು ಸೂಚನೆ ನೀಡಿದ್ದು ಈ ನಿಟ್ಟಿನಲ್ಲಿ ಸ್ಥಳೀಯ ದೇವಾಲಯಗಳ ಸ್ವಚ್ಛತೆ ಮೂಲಕ ಚಾಲನೆ ನೀಡಲಾಗಿದೆ ಎಂದು ಬ್ರಿಗೇಡ್ ಪ್ರಮುಖರಾದ ನವನೀತ್ ಪೊನ್ನೇಟಿ ತಿಳಿಸಿದರು.