ವೀರಾಜಪೇಟೆ, ಸೆ. 8: ಕಾನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಕವನ್ ಕಾರ್ಯಪ್ಪ ಅಧ್ಯಕ್ಷತೆಯಲ್ಲಿ ವೀರಾಜಪೇಟೆ ತಾಲೂಕು ಮಂಡಲ ಅಧ್ಯಕ್ಷ ನೆಲ್ಲಿರ ಚಲನ್ ಕುಮಾರ್ ನೇತೃತ್ವದಲ್ಲಿ ಕಾನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯುವ ಮೋರ್ಚಾ ಅಧ್ಯಕ್ಷರಾಗಿ ಸಚಿನ್, ಉಪಾಧ್ಯಕ್ಷರಾಗಿ ಗುಲ್ಸನ್ ಗಣಪತಿ, ಪ್ರಧಾನ ಕಾರ್ಯದರ್ಶಿಯಾಗಿ ಮಚ್ಚಮಾಡ ತಿಮ್ಮಯ್ಯ ಅವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭ ಕಾನೂರು ಶಕ್ತಿ ಕೇಂದ್ರ ಸಹ ಪ್ರಮುಖ್ ತೀತಮಾಡ ಜಯಾ, ತಾಲೂಕು ಸಮಿತಿ ಸದಸ್ಯ ಕಾಡ್ಯಮಾಡ ಮಾಚಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಞ್ಞಂಗಡ ಅರುಣ್ ಭೀಮಯ್ಯ, ವೀರಾಜಪೇಟೆ ತಾಲೂಕು ಉಪಾಧ್ಯಕ್ಷ ಕುಪ್ಪಂಡ ಗಿರೀಶ್, ತಾಲೂಕು ಪ್ರಧಾನ ಕಾರ್ಯದರ್ಶಿ ವಾಟೆರೀರ ಬೋಪಣ್ಣ, ಜಿಲ್ಲಾ ಖಜಾಂಜಿ ಚೆಪ್ಪುಡಿರ ಮಾಚಯ್ಯ, ಹಿಂದುಳಿದ ಮೋರ್ಚಾದ ಅಧ್ಯಕ್ಷ ರಾಜೇಶ್, ತಾಲೂಕು ಪಂಚಾಯಿತಿ ಸದಸ್ಯ ಪ್ರಕಾಶ್, ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಭರತ್, ಉಪಾಧ್ಯಕ್ಷ ರಂಜನ್ ಪೆÇನ್ನಣ್ಣ ಮತ್ತಿತರರಿದ್ದರು.