ಮಡಿಕೇರಿ, ಸೆ.11 : ಭಾರತ ಸಂವಿಧಾನ ಅನುಚ್ಛೇಧ 275(1)ರಡಿ ಹಾಗೂ ವಿಶೇಷ ಕೇಂದ್ರೀಯ ನೆರವಿನಡಿ ಪರಿಶಿಷ್ಟ ಪಂಗಡದವರ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಫಲಾನುಭವಿಗಳಿಂದ ಹನಿ ನೀರಾವರಿ ಮತ್ತು ಪಾಲಿ, ನೆರಳು ಮನೆ ಕಾರ್ಯಕ್ರಮ ಅನುಷ್ಠಾನ ಗೊಳಿಸುವ ಸಂಬಂಧ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು. ಆದರೆ ಯಾವುದೇ ಅರ್ಜಿಗಳು ಸ್ವೀಕೃತಗೊಂಡಿಲ್ಲ.
ಆದ್ದರಿಂದ, ಮತ್ತೊಮ್ಮೆ ಅರ್ಜಿಯನ್ನು ಸಲ್ಲಿಸಲು ಅವಕಾಶವಿದ್ದು, ತಾ. 24 ಕೊನೆಯ ದಿನವಾಗಿದೆ. ಸಂಬಂಧಿಸಿದ ಅರ್ಜಿ ನಮೂನೆಗಳನ್ನು ಪಡೆಯಲು ತಾಲೂಕು ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿ ಕಾರಿಗಳ ಕಚೇರಿ, ಪೊನ್ನಂಪೇಟೆ- 08274-261261, ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ- 08272-223552, ಸಹಾಯಕ ನಿರ್ದೇಶಕರು (ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ-08276-281115 ಸಂಪರ್ಕಿಸುವಂತೆ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಸಿ. ಶಿವಕುಮಾರ್ ಕೋರಿದ್ದಾರೆ.