ಮಡಿಕೇರಿ, ಸೆ.11 : ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತ್ತುವಾರಿ ಸಚಿª ವಿ.ಸೋಮಣ್ಣ ಅವರು ತಾ. 13 ಹಾಗೂ 14ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ತಾ. 13 ರಂದು ಬೆಳಿಗ್ಗೆ 10.15 ಗಂಟೆಗೆ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರಿಗೆ ಸಾಂಕೇತಿಕವಾಗಿ ಸ್ಮಾರ್ಟ್ಫೋನ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ತಾ. 14ರಂದು ಬೆಳಿಗ್ಗೆ 10.30 ಗಂಟೆಗೆ ತ್ರೈಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಬಳಿಕ ಮಧ್ಯಾಹ್ನ 3 ಗಂಟೆಗೆ ಜಿಲ್ಲೆಯ ಬಿಳಿಗೇರಿ, ಕೆ.ನಿಡುಗಣೆ ಹಾಗೂ ಗಾಳಿಬೀಡು ಗ್ರಾಮಗಳಲ್ಲಿ ಪ್ರವಾಹ ಸಂತ್ರಸ್ತರಿಗಾಗಿ ನಿರ್ಮಾಣವಾಗುತ್ತಿರುವ ಮನೆಗಳ ನಿರ್ಮಾಣದ ಕಾಮಗಾರಿಗಳ ಸ್ಥಳ ಪರಿವೀಕ್ಷಣೆ ಮಾಡಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಎಸ್.ಬಿ.ನರೇಂದ್ರ ತಿಳಿಸಿದ್ದಾರೆ.