ಮಡಿಕೇರಿ, ಸೆ. 10: ಕೊಡಗು ಜಿಲ್ಲೆಯ ಮೂರು ತಾಲೂಕುಗಳು ಅತಿವೃಷ್ಟಿ ಹಾಗೂ ಪ್ರವಾಹ ಪೀಡಿತ ಜಿಲ್ಲೆ ಎಂದು ಸರ್ಕಾರ ಘೋಷಿಸಿದೆ. ರಾಜ್ಯದ 23 ಜಿಲ್ಲೆಗಳ 130 ತಾಲೂಕುಗಳು ಮಹಾಮಳೆಯಿಂದ ಹಾನಿಗೊಳಗಾಗಿವೆ ಕೊಡಗು ಜಿಲ್ಲೆಯಲ್ಲಿಯೂ ಅತಿವೃಷ್ಟಿ ಮತ್ತು ಪ್ರವಾಹ ಉಂಟಾಗಿದ್ದು, ಜಿಲ್ಲೆಯಲ್ಲಿ ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ನಿಯಮಗಳಡಿ ಪರಿಹಾರ ನೀಡುವಂತೆ ರಾಜ್ಯ ಸರ್ಕಾರ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ.