ಶನಿವಾರಸಂತೆ, ಸೆ. 11: ಕಸಾಪ ಜಿಲ್ಲಾ ಘಟಕ ಹಾಗೂ ಶನಿವಾರಸಂತೆ ಹೋಬಳಿ ಘಟಕಗಳ ಸಹಭಾಗಿತ್ವದಲ್ಲಿ ದಿ. ಶಾಂತಮಲ್ಲ ಸ್ವಾಮಿಗಳ ದತ್ತಿ ಹಾಗೂ 2019-20ರ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯು ಪರೀಕ್ಷೆಯಲ್ಲಿ ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಗೌರವ ಪುರಸ್ಕಾರ ಕಾರ್ಯಕ್ರಮ ತಾ. 12ರಂದು (ಇಂದು) ಮಧ್ಯಾಹ್ನ 3.30ಕ್ಕೆ ಪ್ರೆಸ್‍ಕ್ಲಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಸಾಪ ಹೋಬಳಿ ಘಟಕದ ಅಧ್ಯಕ್ಷ ನಾಗರಾಜ್ ವಹಿಸುವರು. ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಉದ್ಘಾಟಿಸುವರು. ಅತಿಥಿಗಳಾಗಿ ತಾಲೂಕು ಘಟಕದ ಅಧ್ಯಕ್ಷ ಹೆಚ್.ಜೆ. ಜವರಪ್ಪ, ಪತ್ರಕರ್ತರ ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಪಾಲ್ಗೊಳ್ಳಲಿದ್ದಾರೆ. ವಿಘ್ನೇಶ್ವರ ವಿದ್ಯಾಸಂಸ್ಥೆ ಶಿಕ್ಷಕ ಕೆ.ಪಿ. ಜಯಕುಮಾರ್, ಕೊಡಗಿನ ವೀರಶೈವ ಅರಸರು ವಿಷಯದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.