ಪೆರಾಜೆ, ಸೆ. 11: ಭಾರತೀಯ ಜನತಾ ಪಾರ್ಟಿ ಪೆರಾಜೆ ಶಕ್ತಿ ಕೇಂದ್ರದ ಸಭೆ ಅಧ್ಯಕ್ಷ ನಂಜಪ್ಪ ನಿಡ್ಯಮಲೆ ಅವರ ಅಧ್ಯಕ್ಷತೆಯಲ್ಲಿ ಪೆರಾಜೆ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ಜಿಲ್ಲಾ ಕೃಷಿ ಮೋರ್ಚಾದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕು ಭಾಜಪ ಅಧ್ಯಕ್ಷ ಕಾಂಗೀರ ಸತೀಶ್, ಪ್ರಧಾನ ಕಾರ್ಯದರ್ಶಿ ಡೀನ್ ಬೋಪಣ್ಣ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕೋಡಿರ ಪ್ರಸನ್ನ, ಎ.ಪಿ.ಎಂ.ಸಿ. ಅಧ್ಯಕ್ಷ ಬೆಪ್ಪುರನ ಮೇದಪ್ಪ, ಒಬಿಸಿ ಮೋರ್ಚಾದ ಗಿರೀಶ್ ಕೊಲೆಯಂಡ, ಮಾಧ್ಯಮ ವಕ್ತಾರ ಸುಬ್ರಮಣ್ಯ ಉಪಾಧ್ಯಾಯ, ಮಡಿಕೇರಿ ತಾಲೂಕು ಗ್ರಾಮಾಂತರ ಯುವ ಮೋರ್ಚಾ ಅಧ್ಯಕ್ಷ ಹೇಮಂತ್ ತೋರೆರ, ತಾಲೂಕು ಸಮಿತಿ ಕಾರ್ಯದರ್ಶಿ ಪ್ರಸನ್ನ ನೆಕ್ಕಿಲ, ಸಮಿತಿ ಸದಸ್ಯರಾದ ಕೋಡಿ ಧನಂಜಯ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಹೇಶ್ ಮೂಲೆಮಜಲು, ಪ್ರವೀಣ್, ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕಿ ಪ್ರಮೀಳಾ ಭಾರದ್ವಾಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.