ಚೆಟ್ಟಳ್ಳಿ, ಸೆ. 11: ಕಾಫಿ ತೋಟ ಹಾಗೂ ವಿವಿಧ ಸಂಸ್ಥೆಗಳಲ್ಲಿ ಬಾಲಕಾರ್ಮಿಕರಾಗಿದ್ದ ನಾಲ್ಕು ಮಕ್ಕಳನ್ನು ರಕ್ಷಣೆ ಮಾಡಿ ಸರ್ಕಾರಿ ಬಾಲಮಂದಿರದಲ್ಲಿ ಪುನರ್ವಸತಿಗೆ ಸೇರಿಸಲಾಗಿದೆ.
ವಿವಿಧ ಇಲಾಖೆಯ ಅಧಿಕಾರಿಗಳ ಸಹಯೋಗದೊಂದಿಗೆ ತೆರಳಿ ವೀರಾಜಪೇಟೆ ತಾಲೂಕಿನ ಬಿರುನಾಣಿ, ಬಾಡಗರಕೇರಿ, ಹಾಗೂ ಪೆÇರಾಡು ಗ್ರಾಮಗಳ ಕಾಫಿ ತೋಟ ಹಾಗೂ ವಿವಿಧ ಸಂಸ್ಥೆಗಳಲ್ಲಿ ಬಾಲ ಕಾರ್ಮಿಕರಾಗಿ ದುಡಿಸಿಕೊಳ್ಳುತ್ತಿದ್ದ ವ್ಯಕ್ತಿಗಳ ಮೇಲೆ ಕ್ರಮ ಕೈಗೊಂಡು ನಾಲ್ಕು ಮಕ್ಕಳನ್ನು ರಕ್ಷಣೆ ಮಾಡಲಾಗಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ನಿರ್ದೇಶಕ ಆರ್. ಶೀರಾಜ್ ಅಹಮ್ಮದ್ ತಿಳಿಸಿದ್ದಾರೆ.
ಈ ಸಂದರ್ಭ ಹಿರಿಯ ಕಾರ್ಮಿಕ ನಿರೀಕ್ಷಕ ಜಯಣ್ಣ, ಪೆÇಲೀಸ್ ವಿಶೇಷ ಮಕ್ಕಳ ಘಟಕದ ಸುಮತಿ, ಮಕ್ಕಳ ಸಹಾಯವಾಣಿಯ ತಂಡದ ಸದಸ್ಯ ಪ್ರವೀಣ್ , ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿಗಳಾದ ಕಿರಣ್, ಇರ್ಶಾದ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವಿ, ಆರ್ಡಿಪಿ ಆರ್ ಕಾರ್ಯದರ್ಶಿ ವಿ. ಟಿ ಮೋಹನ್ ಸೇರಿದಂತೆ ಮತ್ತಿತರರು ಹಾಜರಿದ್ದರು