ಸೋಮವಾರಪೇಟೆ, ಸೆ. 11: ತಾಲೂಕಿನ ಕುಂಬೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೆಯ ವಿದ್ಯಾರ್ಥಿಗಳು ಶ್ರಮದಾನ ಮಾಡುವ ಮೂಲಕ ಸ್ವಚ್ಛತಾ ಕಾರ್ಯ ನಡೆಸಿದರು. ಶಾಲೆಯ ಆವರಣದಲ್ಲಿ ಬೆಳೆದಿದ್ದ ಕುರುಚಲು ಕಾಡನ್ನು ಕಡಿದು, ರಸ್ತೆ ಬದಿಯಲ್ಲಿದ್ದ ತ್ಯಾಜ್ಯವನ್ನು ತೆಗೆದು ಸ್ವಚ್ಛಗೊಳಿಸಲಾಯಿತು. ಈ ಸಂದರ್ಭ ಹಳೆಯ ವಿದ್ಯಾರ್ಥಿಗಳಾದ ಕೆ.ಜಿ. ಮಂಜು, ರವಿ, ಅನಿಲ್, ವಿನು, ದೀಪು ಸೇರಿದಂತೆ ಇತರರು ಉಪಸ್ಥಿತರಿದ್ದರು.