ಮಡಿಕೇರಿ, ಸೆ. 11 : ಪರಿಶಿಷ್ಟ ಪಂಗಡದ ಕಲ್ಯಾಣ ಇಲಾಖಾ ವತಿಯಿಂದ ವಿಶೇಷ ಕೇಂದ್ರೀಯ ನೆರವಿನಡಿ ಅಲೆಮಾರಿ, ಮೂಲನಿವಾಸಿ ಮತ್ತು ಅರಣ್ಯ ಅವಲಂಭಿತರಿಗೆ ಹೈನುಗಾರಿಕೆ, ಹಸು, ಎಮ್ಮೆ ಘಟಕ, ಕುರಿ, ಮೇಕೆ ಘಟಕ, ಸರಕು ಸಾಗಾಣಿಕೆ ವಾಹನ, ಮೊಲ ಸಾಕಾಣಿಕೆ ಹಾಗೂ ಹಂದಿ ಸಾಕಾಣಿಕೆ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈಗಾಗಲೇ ಫಲಾನುಭವಿಗಳು ಅರ್ಜಿ ಸಲ್ಲಿಸಿರುತ್ತಾರೆ. ಅರ್ಹ ಫಲಾನುಭವಿಗಳಿದ್ದು, ಅರ್ಜಿ ಸಲ್ಲಿಸಲು ಬಾಕಿ ಇದ್ದಲ್ಲಿ ಸರ್ಕಾರದ ಮಾರ್ಗ ಸೂಚಿಯಂತೆ ಆಸಕ್ತರು ಮೇಲ್ಕಂಡ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಅರ್ಜಿಯನ್ನು ಸಲ್ಲಿಸುವಂತೆ ಕೋರಲಾಗಿದೆ. ಅರ್ಜಿಯನ್ನು ಕಚೇರಿ ವೇಳೆಯಲ್ಲಿ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಪೊನ್ನಂಪೇಟೆ (08274-261261) ಹಾಗೂ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ (08276-281115) ಮತ್ತು ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ (08272-223552) ಇಲ್ಲಿ ಪಡೆದು ತಾ. 25 ರೊಳಗಾಗಿ ಸಲ್ಲಿಸಬೇಕಾಗಿರುತ್ತದೆ ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಸಿ. ಶಿವಕುಮಾರ್ ಕೋರಿದ್ದಾರೆ.