ಮಡಿಕೇರಿ, ಸೆ. 10: ತಾ. 11 ರಂದು (ಇಂದು) ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಕೊಡಗಿಗೆ ಭೇಟಿ ನೀಡಲಿದ್ದು, ಅವರನ್ನು ತಿತಿಮತಿ ಗೇಟ್‍ನಲ್ಲಿ ಸ್ವಾಗತಿಸಲಾಗುತ್ತದೆ. ಅವರು ಮಧ್ಯಾಹ್ನ 3 ಗಂಟೆಗೆ ಗೋಣಿಕೊಪ್ಪಲಿ ನಲ್ಲಿ ನಡೆಯಲಿರುವ ಆರೋಗ್ಯ ಹಸ್ತ ಕಾರ್ಯಕ್ರಮ, ಸಂಜೆ 4ಕ್ಕೆ ಮೂರ್ನಾಡುವಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಸಂಜೆ 5 ಗಂಟೆಗೆ ನಗರದ ಹೊಟೇಲ್ ವ್ಯಾಲಿ ವ್ಯೂನಲ್ಲಿ ಪಕ್ಷ ಸಂಘಟನೆ, ಪಕ್ಷದ ಬೆಳವಣಿಗೆ ಬಗ್ಗೆ ಹಾಗೂ ಆರೋಗ್ಯ ಹಸ್ತ ಕಾರ್ಯಕ್ರಮದ ಕುರಿತು ಮಾತನಾಡಲಿದ್ದಾರೆ. ಸಂಜೆ 5.30ಕ್ಕೆ ಕೊಡಗು ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್ ಮಾಹಿತಿ ನೀಡಿದರು.

ಆರೋಗ್ಯ ತಪಾಸಣೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವ ಕುಮಾರ್ ಅವರ ಮುಂದಾಳತ್ವದಲ್ಲಿ ಮಹತ್ವಾಕಾಂಕ್ಷಿ ‘ಆರೋಗ್ಯ ಹಸ್ತ’ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಸುತ್ತಿದ್ದು, ಪ್ರತಿ ಪಂಚಾಯಿತಿಯಲ್ಲಿ ಇಬ್ಬರು ಕೊರೊನಾ ಯೋಧರನ್ನು ನಿಯುಕ್ತಿಗೊಳಿಸಿ, ಜನಸಾಮಾನ್ಯರ ಆರೋಗ್ಯ ತಪಾಸಣಾ ಕಾರ್ಯವನ್ನು ಮಾಡಲಾಗಿದೆ. ಜಿಲ್ಲೆಯ 104 ಗ್ರಾಪಂ, 3 ಪ.ಪಂ. ಮತ್ತು ಒಂದು ನಗರ ಸಭೆಯಲ್ಲಿ ಒಟ್ಟು 116 ಕೊರೊನಾ ಯೋಧರ ತಂಡವನ್ನು ಮಾಡಲಾಗಿದ್ದು, ಒಟ್ಟು 230 ಕಾಂಗ್ರೆಸ್ ಕಾರ್ಯಕರ್ತರು ಕೊರೊನಾ ಯೋಧರಾಗಿ ಕಾರ್ಯನಿರ್ವಹಿಸು ತ್ತಿದ್ದಾರೆ. ಅವರ ಮೂಲಕ ಇಲ್ಲಿಯವರೆಗೆ 20 ಸಾವಿರಕ್ಕಿಂತಲೂ ಹೆಚ್ಚಿನ ಕುಟುಂಬಗಳ ಆರೋಗ್ಯ ಪರೀಕ್ಷೆ ಮಾಡ ಲಾಗಿದೆ. ಈ ಕಾರ್ಯಕ್ರಮ ಸೆಪ್ಟೆಂಬರ್ ಅಂತ್ಯ ಇಲ್ಲವೆ ಮುಂದಿನ ತಿಂಗಳ ಮೊದ ಲೆರಡು ವಾರಗಳಲ್ಲಿ ಮುಕ್ತಾಯ ಗೊಳ್ಳಲಿದೆ. ಕೊರೊನಾ ಯೋಧರಿಗೆ ಪಕ್ಷದಿಂದ ತಲಾ ರೂ. 1 ಲಕ್ಷ ವಿಮೆ ಮಾಡಲಾಗಿದೆ ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಖಜಾಂಚಿ ಹೆಚ್.ಎಂ. ನಂದ ಕುಮಾರ್, ವಕ್ತಾರ ಟಿ.ಇ. ಸುರೇಶ್, ಜಿಲ್ಲಾ ಕಾಂಗ್ರೆಸ್ ಸದಸ್ಯರಾದ ಗೀತಾ ಧರ್ಮಪ್ಪ ಹಾಗೂ ಸಾಮಾಜಿಕ ಜಾಲತಾಣದ ಜಿಲ್ಲಾ ಸಂಯೋಜಕ ಹೊಸೂರು ಸೂರಜ್ ಉಪಸ್ಥಿತರಿದ್ದರು.