ಮಡಿಕೇರಿ, ಸೆ.10: ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯು ತಾ. 11 ರಂದು ಬೆಳಗ್ಗೆ 9 ಗಂಟೆಗೆ ನಗರದ ಅರಣ್ಯ ಭವನದಲ್ಲಿ ನಡೆಯಲಿದೆ. ನಾಡಿನ ಅರಣ್ಯ ಮತ್ತು ವನ್ಯ ಜೀವಿ ಸಂಪತ್ತನ್ನು ಸಂರಕ್ಷಿಸುವ ಸಂದರ್ಭದಲ್ಲಿ ಪ್ರಾಣತ್ಯಾಗ ಮಾಡಿದ ಅರಣ್ಯ ಇಲಾಖೆಯ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುತ್ತದೆ.
ಕೊಡಗು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಟಿ.ಹೀರಾಲಾಲ್, ಭಾರತೀಯ ವಾಯುಸೇನೆಯ ನಿವೃತ್ತ ಏರ್ ಮಾರ್ಷಲ್ ಕೆ.ಸಿ.ಕಾರ್ಯಪ್ಪ, ಮಡಿಕೇರಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್, ನಾಗರಹೊಳೆ ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನದ ನಿರ್ದೇಶಕರು ಮತ್ತು ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ.ಮಹೇಶ್, ಮಡಿಕೇರಿ ಅರಣ್ಯ ಸಂಶೋಧನೆಯ ಜೆ.ದೀಪ, ಮಡಿಕೇರಿ ಉಪ ವಿಭಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಿಂಧೆ ನೀಲೇಶ್, ಅರಣ್ಯ ಸಂಚಾರಿ ದಳ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿ.ಜಿ.ಕಾರ್ಯಪ್ಪ, ವೀರಾಜಪೇಟೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಚಕ್ರಪಾಣಿ ವೈ., ಸೋಮವಾರಪೇಟೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎ.ನೆಹರು, ಮಡಿಕೇರಿ ವನ್ಯಜೀವಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಡಿ.ಎಸ್.ದಯಾನಂದ ಇತರರು ಪಾಲ್ಗೊಳ್ಳಲಿದ್ದಾರೆ.