ಕೂಡಿಗೆ, ಸೆ. 11: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರಕ್ಕೆ ರಾಜ್ಯ ಐಎನ್‍ಟಿಯುಸಿ ಕಾರ್ಮಿಕ ಸಂಘಟನೆಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ ಭೇಟಿ ನೀಡಿ ಕೇಂದ್ರದಲ್ಲಿ ಸ್ಥಾಪನೆ ಮಾಡಲು ಉದ್ದೇಶಿಸಿರುವ ಕಸ ವಿಲೇವಾರಿ ಘಟಕದ ಜಾಗವನ್ನು ಪರಿಶೀಲನೆ ನಡೆಸಿದರು.
ಈ ಕೇಂದ್ರದ ಆವರಣದಲ್ಲಿ ಕಸ ವಿಲೇವಾರಿ ಘಟಕವನ್ನು ಪ್ರಾರಂಭ ಮಾಡದೆ ಸೀಗೆಹೊಸೂರು ಸಮೀಪದ ಹುದುಗೂರು ಅರಣ್ಯ ಇಲಾಖೆ ಸಮೀಪದ ಜಾಗದಲ್ಲಿ ಪ್ರಾರಂಭ ಮಾಡಬಹುದಾಗಿದೆ. ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆ ಹಣವನ್ನು ಆ ಜಾಗಕ್ಕೆ ವಿನಿಯೋಗಿಸಿ ಕಾಮಗಾರಿಯನ್ನು ನಡೆಸುವಂತೆ ಒತ್ತಾಯಿಸಿದ್ದಾರೆ.
ಈ ಸಂದರ್ಭ ಜಿಲ್ಲಾ ಐಎನ್‍ಟಿಯುಸಿ ಸಂಘದ ಅಧ್ಯಕ್ಷ ಗೋವಿಂದರಾಜ್ ದಾಸ್, ಕಾರ್ಯದರ್ಶಿ ಅಜ್ಜಳಿ ರವಿ, ಕೂಡುಮಂಗಳೂರು ಸಹಕಾರ ಸಂಘದ ಉಪಾಧ್ಯಕ್ಷ ಟಿ.ಪಿ. ಹಮೀದ್, ತೊರೆನೂರು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಕುಮಾರ್ ಸೇರಿದಂತೆ ಪ್ರಮುಖರು ಹಾಜರಿದ್ದರು.