ಸೋಮವಾರಪೇಟೆ, ಸೆ. 11: ಮಕ್ಕಳ ಸಹಾಯವಾಣಿ ಕೇಂದ್ರದ ವತಿಯಿಂದ ತಾಲೂಕಿನ ವಳಗುಂದ ಗಿರಿಜನ ಹಾಡಿಯ ಮಕ್ಕಳಿಗೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿ ಮಾಸ್ಕ್ಗಳನ್ನು ವಿತರಿಸಲಾಯಿತು. ಸಮುದಾಯ ಭವನದಲ್ಲಿ ನಡೆಯುತ್ತಿರುವ ವಿದ್ಯಾಗಮ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಮಾಲಂಬಿ ಆಶ್ರಮ ಶಾಲೆಯ ವಿದ್ಯಾರ್ಥಿಗಳಿಗೆ, ಕೊರೊನಾ ಸೋಂಕು ಹರಡುವದನ್ನು ತಡೆಗಟ್ಟುವ ವಿಧಾನಗಳು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವದು, ಮಾಸ್ಕ್ ಧರಿಸುವದು, ಶುಚಿತ್ವಕ್ಕೆ ಆದ್ಯತೆ ನೀಡುವ ಬಗ್ಗೆ ಮಾಹಿತಿ ನೀಡಲಾಯಿತು. ಇದರೊಂದಿಗೆ ಮಕ್ಕಳ ಹಕ್ಕುಗಳ ರಕ್ಷಣೆ, ಬಾಲ್ಯವಿವಾಹ ನಿಷೇಧ, ಬಾಲಕಾರ್ಮಿಕ ಪದ್ದತಿ ನಿರ್ಮೂಲನೆ ಬಗ್ಗೆ ಮಕ್ಕಳ ಸಹಾಯವಾಣಿ ಕೇಂದ್ರದ ಬಿ.ಕೆ. ಕುಸುಮ, ಯೋಗೇಶ್ ತಿಳುವಳಿಕೆ ನೀಡಿದರು. ಶಾಲಾ ಶಿಕ್ಷಕ ಶಶಿಧರ್ ಉಪಸ್ಥಿತರಿದ್ದರು.