ಶ್ರೀಮಂಗಲ, ಸೆ. 11: ಹುದಿಕೇರಿ ಗ್ರಾ.ಪಂ. ವ್ಯಾಪ್ತಿಯ ಹೈಸೊಡ್ಲೂರು ಗ್ರಾಮದ ಗೃಹಿಣಿ ಕೋಟ್ರಮಾಡ ಭಾರತಿ (45) ಎಂಬವರು ಮನೆಯ ಸಮೀಪ ಇರುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ ಭಾರತಿ ಅವರಿಗೆ ಅನಾರೋಗ್ಯ ಸಮಸ್ಯೆ ಇತ್ತು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಮೃತ ಭಾರತಿ ಪತಿ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಶ್ರೀಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.