ಸಂಕೇತ್ ಪೂವಯ್ಯ

ಮಡಿಕೇರಿ, ಸೆ.11 : ಕೊಡಗು ಜಿಲ್ಲೆಯ ಜನ ಪ್ರಜಾತಂತ್ರ ವ್ಯವಸ್ಥೆಯ ಮೇಲೆ ನಂಬಿಕೆಯನ್ನು ಕಳೆದುಕೊಂಡಿದ್ದಾರೆ. ಆ ನಿಟ್ಟಿನಲ್ಲಿ ಪ್ರಾಮಾಣಿಕ ಹೋರಾಟ ಮತ್ತು ಜಾತ್ಯತೀತ ಶಕ್ತಿಯನ್ನು ಕೊಡಗು ಜಿಲ್ಲೆಯಲ್ಲಿ ಕಟ್ಟಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಜೆಡಿಎಸ್ ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ಸಂಕೇತ್ ಪೂವಯ್ಯ ತಿಳಿಸಿದ್ದಾರೆ. ಜಾತಿ, ಧರ್ಮದ ಆಧಾರದಲ್ಲಿ ಜಿಲ್ಲೆಯಲ್ಲಿ ಮತದಾನವಾಗುತ್ತಿದ್ದು, ನಿಷ್ಠಾವಂತರ ಹೋರಾಟಗಳಿಗೆ ಯಾವುದೇ ಬೆಲೆ ಸಿಗುತ್ತಿಲ್ಲವೆಂದು ಬೇಸರ ವ್ಯಕ್ತಪಡಿಸಿದ್ದಾರೆ. ಆನೆ, ಮಾನವ ಸಂಘರ್ಷ, ವನ್ಯ ಜೀವಿಗಳ ದಾಳಿ, ರೈತರ ಆತ್ಮಹತ್ಯೆ, ಬೆಳೆ ನಾಶ, ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಯಾವುದೇ ಹೋರಾಟಗಳಲ್ಲಿ ಭಾಗಿಯಾಗುವುದಾಗಿ ತಿಳಿಸಿದ್ದಾರೆ.