ಶನಿವಾರಸಂತೆ, ಸೆ. 10: ಕಸಾಪ ಜಿಲ್ಲಾ ಘಟಕ ಹಾಗೂ ಕೊಡ್ಲಿಪೇಟೆ ಹೋಬಳಿ ಘಟಕದ ಸಹಭಾಗಿತ್ವದಲ್ಲಿ ಡಾ. ನಾ. ಡಿಸೋಜ ಮಕ್ಕಳ ಸಾಹಿತ್ಯ ಪುರಸ್ಕಾರ ದತ್ತಿ ಹಾಗೂ 2019-20ರ ಸಾಲಿನ ಎಸ್‍ಎಸ್‍ಎಲ್‍ಸಿ ಮತ್ತು ಪಿಯು ಪರೀಕ್ಷೆಯ ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಗೌರವ ಪುರಸ್ಕಾರ ಕಾರ್ಯಕ್ರಮ ತಾ. 12 ರಂದು ಬೆಳಿಗ್ಗೆ 11.30ಕ್ಕೆ ಕೊಡ್ಲಿಪೇಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯಲಿದೆ.
ಕಸಾಪ ಹೋಬಳಿ ಘಟಕದ ಅಧ್ಯಕ್ಷ ಅಬ್ದುಲ್ ರಬ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಘಟಕದ ಅಧ್ಯಕ್ಷ ಲೋಕೇಶ್ ಸಾಗರ್ ಉದ್ಘಾಟಿಸುವರು. ಅತಿಥಿಗಳಾಗಿ ತಾಲೂಕು ಘಟಕದ ಅಧ್ಯಕ್ಷ ಎಚ್.ಜೆ. ಜವರ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಎಂ. ಮಂಜುನಾಥ್, ಸಿ.ಆರ್.ಪಿ.ಗಳಾದ ಎಸ್.ಎಂ. ಸುರೇಶ್, ಜಾನ್ ಪೌಲ್ ಡಿಸೋಜ, ಕಾಫಿ ಬೆಳೆಗಾರ ಶಾಂತೇಶ್ ಹಾಗೂ ಮುಖ್ಯ ಶಿಕ್ಷಕಿ ಜಾನಕಮ್ಮ ಪಾಲ್ಗೊಳ್ಳುವರು.