ಮಡಿಕೇರಿ, ಸೆ. 10: ಬೆಂಗಳೂರಿನ ಬಿ.ಬಿ.ಎಂ.ಪಿ. ಮೂಲಕ ನೀಡಲಾಗುವ ಪ್ರತಿಷ್ಠಿತ ನಾಡಪ್ರಭು ಕೆಂಪೇಗೌಡ ಪ್ರಶಸ್ತಿಗೆ ಕೊಡಗಿನ ಇಬ್ಬರು ಭಾಜನರಾಗಿದ್ದು, ಪ್ರಶಸ್ತಿ ಸ್ವೀಕರಿಸಿದ್ದಾರೆ.
ವಿವಿಧ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲಾಗಿದ್ದು, ಇತರ ಸೇವೆ ಕ್ಷೇತ್ರದಿಂದ ನಿವೃತ್ತ ಲೆಫ್ಟಿನೆಂಟ್ ಜನರಲ್ ಪಟ್ಟಚೆರವಂಡ ಸಿ. ತಿಮ್ಮಯ್ಯ ಹಾಗೂ ಸಾಹಿತ್ಯ ಕ್ಷೇತ್ರದಿಂದ ಪತ್ರಕರ್ತ ಮಾಣಿಪಂಡ ಸಂತೋಷ್ ತಮ್ಮಯ್ಯ ಪ್ರಶಸ್ತಿ ಪಡೆದುಕೊಂಡಿದ್ದಾರೆ.