ಸೋಮವಾರಪೇಟೆ, ಸೆ. 11: ಕುಶಾಲನಗರದ ಸಹಕಾರ ಸಂಘದ ಮಾದರಿಯಲ್ಲಿ ಸೋಮವಾರಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಂಘದ ಬಡ ಕೂಲಿ ಕಾರ್ಮಿಕ ಸದಸ್ಯರ ಮಕ್ಕಳಿಗೆ ಉಚಿತವಾಗಿ ಶಾಲಾ ಬ್ಯಾಗ್ ಮತ್ತು ಪುಸ್ತಕಗಳನ್ನು ವಿತರಿಸಲು ಕ್ರಮ ಕೈಗೊಳ್ಳಬೇಕೆಂದು ಸದಸ್ಯ ಹೆಚ್.ಎ. ನಾಗರಾಜ್ ಮನವಿ ಮಾಡಿದ್ದಾರೆ.
ಕೊರೊನಾ ಲಾಕ್ಡೌನ್ ನಿಂದಾಗಿ ಬಡ ಕೂಲಿ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದು, ವಿದ್ಯಾರ್ಥಿ ಗಳಿಗೆ ಪುಸ್ತಕ, ಬ್ಯಾಗ್ ವಿತರಿಸ ಬೇಕೆಂದು ಸಂಘದ ಅಧ್ಯಕ್ಷರೂ ಸೇರಿದಂತೆ ಆಡಳಿತ ಮಂಡಳಿ ನಿರ್ದೇಶಕರಿಗೆ ಮನವಿ ಸಲ್ಲಿಸಿದ್ದಾರೆ.