ಮಡಿಕೇರಿ, ಸೆ. 10: ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಇಲಾಖಾ ವತಿಯಿಂದ ನೀಡಲಾಗುವ ಪ್ರೋತ್ಸಾಹಧನ ಮಂಜೂರಾತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ತಾ. 30 ಕೊನೆಯ ದಿನವಾಗಿದೆ. ವಿದ್ಯಾರ್ಥಿಗಳು ದ್ವಿತೀಯ/ ಅಂತಿಮ ವರ್ಷದ ಪಿಯುಸಿಯನ್ನು ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರಬೇಕು. ಸಿಬಿಎಸ್‍ಸಿ ಮತ್ತು ಐಸಿಎಸ್‍ಇ ವತಿಯಿಂದ ನಡೆಸಲಾಗುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾದವರು ಸಹ ಈ ಯೋಜನೆಯಡಿಯಲ್ಲಿ ಪ್ರೋತ್ಸಾಹ ಧನ ಪಡೆಯಲು ಅರ್ಹರಿರುತ್ತಾರೆ.
ಅಗತ್ಯ ದಾಖಲಾತಿಗಳು: ದ್ವಿತೀಯ ಪಿಯುಸಿ ತರಗತಿಗೆ ಅಭ್ಯರ್ಥಿಯ ಭಾವಚಿತ್ರ, ಅಂಕಪಟ್ಟಿ, ದ್ವಿತೀಯ ಪಿಯುಸಿ ಅಂಕಪಟ್ಟಿ, ಆಧಾರ್ ಪ್ರತಿ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕ. ಪದವಿ, ಸ್ನಾತಕೋತ್ತರ, ಪದವಿ, ಕೃಷಿ, ಪಶು ಸಂಗೋಪನೆ, ಇಂಜಿನಿಯರಿಂಗ್, ಮೆಡಿಕಲ್ ವಿದ್ಯಾರ್ಥಿಗಳಗಿಗೆ ಭಾವಚಿತ್ರ, ಎಲ್ಲಾ ಸೆಮ್‍ಗಳ ಅಂಕಪಟ್ಟಿ, ಆಧಾರ್ ಪ್ರತಿ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದೊಂದಿಗೆ ವಿದ್ಯಾರ್ಥಿಗಳು ತಿತಿತಿ.sತಿ.ಞಚಿಡಿ.ಟಿiಛಿ.iಟಿ ನಲ್ಲಿ ಅರ್ಜಿ ಸಲ್ಲಿಸುವಾಗ ಯಾವುದಾದರೂ ತಾಂತ್ರಿಕ ತೊಂದರೆಯಾದಲ್ಲಿ ಇಲಾಖೆಯ ಟೋಲ್‍ಫ್ರೀ ದೂ. 080-22634300, 080-22353757 ಅಥವಾ ಸಹಾಯಕ ನಿರ್ದೇಶಕರು (ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ ದೂ. 9480843156 ಮತ್ತು 08276-281115 ನ್ನು ಸಂಪರ್ಕಿಸಬಹುದು.