ಮಡಿಕೇರಿ, ಸೆ. 11: ಭಾರತೀಯ ಜನತಾ ಪಕ್ಷದ ವೀರಾಜಪೇಟೆ ತಾಲೂಕಿನ ಮಹಿಳಾ ಮೋರ್ಚಾದ ಮೊದಲ ಸಭೆsÀಯು ಗೋಣಿಕೊಪ್ಪಲು ಆರ್‍ಎಂಸಿ ಸಭಾಂಗಣದಲ್ಲಿ ನಡೆಯಿತು.
ಮಹಿಳಾ ಮೋರ್ಚಾದ ಅಧ್ಯಕ್ಷೆ ಮಲಚೀರ ಕವಿತ ಬೋಜಪ್ಪ ಅವರ ಅದ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪಕ್ಷದ ತಾಲೂಕು ಅಧ್ಯಕ್ಷ ನೆಲ್ಲಿರ ಚಲನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಂಞಂಗಡ ಅರುಣ್ ಭೀಮಯ್ಯ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರು, ಪ್ರಸ್ತುತ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ಶರೀನ್ ಸುಬ್ಬಯ್ಯ, ಆರ್‍ಎಂಸಿ ಅಧ್ಯಕ್ಷ ಅಜ್ಜಿಕುಟ್ಟಿರ ಪ್ರವೀಣ್ ಮುತ್ತಪ್ಪ, ಮಹಿಳಾ ಮೋರ್ಚಾ ಮತ್ತು ಅಕ್ರಮ ಸಕ್ರಮ ತಾಲೂಕು ಸದಸ್ಯೆ ಮಾಪಂಗಡ ಯಮುನ ಚಂಗಪ್ಪ, ತಾಲೂಕು ಮಹಿಳಾ ಮೋರ್ಚಾದ ಮಾಜಿ ಅಧ್ಯಕ್ಷೆ ಚೇಂದಂಡ ಸುಮಿ ಸುಬ್ಬಯ್ಯ ಉಪಸ್ಥಿತರಿದ್ದರು.
ಉದ್ಘಾಟನೆಯನ್ನು ತಾಲೂಕು ಪಂಚಾಯಿತಿ ಅಧ್ಯಕ್ಷೆ ಸ್ಮಿತಾ ಪ್ರಕಾಶ್, ಪಕ್ಷದ ಜಿಲ್ಲ್ಲಾ ಘಟಕದ ಉಪಾಧ್ಯಕ್ಷೆ ತೀತಿರ ಊರ್ಮಿಳ ಮತ್ತು ಆರ್‍ಎಂಸಿ ಉಪಾಧ್ಯಕ್ಷೆ ಬೊಳ್ಳಜ್ಜಿರ ಸುಶೀಲ ನೇರವೇರಿಸಿದರು. ಸಭೆಯನ್ನು ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ನೂರೇರ ರತಿ ಪ್ರಾರ್ಥಿಸಿ, ಕಾರ್ಯದರ್ಶಿ ಸುಳ್ಳಿಮಾಡ ಶಿಲ್ಪ ಅಪ್ಪಣ್ಣ ನಿರೂಪಿಸಿ, ಕಾರ್ಯದರ್ಶಿ ಮೇವಡ ವಿಶ್ಮ ಸ್ವಾಗತಿಸಿದರು. ಸಭೆಯಲ್ಲಿ ತಾಲೂಕು ಮಹಿಳಾ ಮೋರ್ಚಾದ ಸದಸ್ಯರು, ತಾಲೂಕು ಪಂಚಾಯಿತಿ ಮಹಿಳಾ ಸದಸ್ಯರು, ಪಕ್ಷದ ಜಿಲ್ಲಾ ಮತ್ತು ತಾಲೂಕು ಘಟಕದ ಸದಸ್ಯರು ಉಪಸ್ಥಿತರಿದ್ದರು. ರತಿ ಅಚ್ಚಪ್ಪ ವಂದಿಸಿದರು.