ಮಡಿಕೇರಿ, ಸೆ. 10: ಕೊಡಗು ಜಿಲ್ಲೆ ಸೇರಿದಂತೆ ಮಲೆನಾಡು ಭಾಗಗಳಲ್ಲಿ ಮಳೆ ಹೆಚ್ಚಾಗುವ ಸಂಭವವಿದ್ದು, ಜಿಲ್ಲೆಯಲ್ಲಿ ವ್ಯಾಪಕವಾಗಿ ಗುಡುಗು ಸಹಿತ ಸಾಧಾರಣದಿಂದ ಭಾರೀ ಮಳೆಯಾಗುವ ಸಂಭವ ಇರುತ್ತದೆ. ಜಿಲ್ಲೆಗೆ ತಾ. 10 ರಿಂದ 11ರ ಬೆಳಿಗ್ಗೆ 8.30 ರವರೆಗೆ ರೆಡ್ ಅಲರ್ಟ್‍ನ್ನು ಭಾರತೀಯ ಹವಾಮಾನ ಇಲಾಖೆ ಘೋಷಿಸಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದಿರಲು ಜಿಲ್ಲಾಡಳಿತ ಮನವಿ ಮಾಡಿದೆ. ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ. ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ 24x7 ಕಂಟ್ರೋಲ್ ರೂಂ. 08272-221077, ವ್ಯಾಟ್ಸ್ ಆ್ಯಪ್ ನಂ. 8550001077 ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.