ಕುಶಾಲನಗರ, ಸೆ. 10: ಡಾ. ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ಟೈಲರಿಂಗ್ ತರಬೇತಿ ಹೊಂದಿದ್ದ ಸುಮಾರು 25ಕ್ಕೂ ಅಧಿಕ ಮಹಿಳಾ ಫಲಾನುಭವಿಗಳಿಗೆ ಐದು ಸಾವಿರ ರೂಪಾಯಿಗಳ ಸಹಾಯಧನದ ಚೆಕ್ಕನ್ನು ವಿತರಿಸಲಾಯಿತು.

ಕುಶಾಲನಗರ ಡಾ. ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ. ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಜಿಲ್ಲಾ ಸಹಾಯಕ ಸಂತೋಷ್ 25ಕ್ಕೂ ಅಧಿಕ ಮಹಿಳೆಯರಿಗೆ ತಲಾ ಐದು ಸಾವಿರ ರೂಪಾಯಿಗಳ ಸಹಾಯಧನದ ಚೆಕ್ ಅನ್ನು ವಿತರಿಸಿದರು. ಮಹಿಳೆಯರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭ ಪಟ್ಟಣ ಪಂಚಾಯಿತಿ ಸದಸ್ಯ ಸುರೇಶ್‍ಕುಮಾರ್, ಪ್ರಮುಖರಾದ ಕೆ.ಬಿ. ರಾಜು, ಜಯಪ್ರಕಾಶ್, ಕೆ.ಟಿ. ಶ್ರೀನಿವಾಸ್ ಮತ್ತಿತರರು ಇದ್ದರು.