ನಾಪೆÇೀಕ್ಲು, ಸೆ. 12: ರಾಜ್ಯದ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಕೊಡಗು ಜಿಲ್ಲೆ ಜಾನಪದದ ತವರೂರು ಆಗಿದೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್ ಅಭಿಪ್ರಾಯಪಟ್ಟರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ನಾಪೆÇೀಕ್ಲು ಕನ್ನಡ ಸಾಹಿತ್ಯ ಪರಿಷತ್ ಹೋಬಳಿ ಘಟಕದ ವತಿಯಿಂದ ನಾಪೆÇೀಕ್ಲು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಡಿ.ಜೆ.ಪದ್ಮನಾಭ ದತ್ತಿನಿಧಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆಯಾಯ ಜಿಲ್ಲೆಗಳಿಗೆ ಸಂಬಂಧಿಸಿದ ಜಾನಪದ ಕಲೆಗಳನ್ನು ಕಾಣಬಹುದು. ಆದರೆ, ಕೊಡಗು ಜಿಲ್ಲೆಯಲ್ಲಿ ಜಿಲ್ಲೆಯ ಜಾನಪದ ಕಲೆಗಳೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ಯಕ್ಷಗಾನ, ಕೇರಳ ರಾಜ್ಯದ ಓಣಂ ಹಬ್ಬದೊಂದಿಗೆ ಬೇರೆ ಬೇರೆ ಜಿಲ್ಲೆಯ ಕಂಸಾಳೆ, ಮಲೆ ಮಹದೇಶ್ವರನ ಹಾಡುಗಳು, ಮತ್ತಿತರ ಜಾನಪದ ಶೈಲಿಗಳನ್ನು ಇಲ್ಲಿ ಕಾಣಬಹುದಾಗಿದೆ ಎಂದರು.

ಕಳೆದ ಎರಡು ವರ್ಷಗಳಲ್ಲಿ ಜಿಲ್ಲೆಯಲ್ಲಿ ಉಂಟಾದ ಪ್ರಾಕೃತಿಕ ವಿಕೋಪದ ಕಾರಣ ಕನ್ನಡ ಸಾಹಿತ್ಯ ಪರಿಷತ್‍ನಿಂದ ಹೆಚ್ಚಿನ ಕಾರ್ಯಕ್ರಮ ನಡೆಸಲು ಸಾಧ್ಯವಾಗಿಲ್ಲ. ಈ ವರ್ಷ ಕೋವಿಡ್ 19 ಕಾರಣದಿಂದ ಯಾವದೇ ಕಾರ್ಯಕ್ರಮ ನಡೆಸಲಾಗಿಲ್ಲ. ಆದರೂ, ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಎಂಬಂತೆ ದತ್ತಿನಿಧಿ ಕಾರ್ಯಕ್ರಮವನ್ನು ಕೊಡಗು ಜಿಲ್ಲೆಯಲ್ಲಿ ಆರಂಭಿಸಲಾಗಿದೆ. ಅದರಂತೆ 10ನೇ ತರಗತಿಯಲ್ಲಿ ಕನ್ನಡ ವಿಷಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗಿದೆ ಎಂದರು.

ಕೊಡಗಿನ ಜಾನಪದ ಕಲೆಯ ಬಗ್ಗೆ ಉಪನ್ಯಾಸ ನೀಡಿದ ಜಿಲ್ಲಾ ಕಸಾಪ ನಿರ್ದೇಶಕಿ ಹಾಗೂ ಶಿಕ್ಷಕಿ ಉಷಾರಾಣಿ, ಕೊಡಗಿನಲ್ಲಿ ಹೆಚ್ಚಿನ ಜಾತಿ, ಜನಾಂಗ, ಕಲೆ, ಸಂಸ್ಕøತಿಗಳನ್ನು ಕಾಣಬಹುದು. ಹುಟ್ಟಿನಿಂದ ಚಟ್ಟದವರೆಗೂ ಇಲ್ಲಿಯ ಸಂಸ್ಕøತಿ, ಆಚಾರ-ವಿಚಾರಗಳು ವಿಭಿನ್ನವಾಗಿವೆ. ಎಷ್ಟೋ ಕಲೆಗಳು ಬೆಳಕಿಗೆ ಬಾರದೆ ನಶಿಸಿಹೋಗುವ ಹಂತ ತಲುಪಿದೆ. ಸೋಬಾನೆ ಪದಗಳು ಇತ್ತೀಚಿನ ವರ್ಷಗಳಲ್ಲಿ ಕಣ್ಮರೆಯಾಗುತ್ತಿದೆ. ಸೋಬಾನೆ ಪದಗಳು ಕೂಡ ಜಾನಪದ ಕಲೆಗೆ ಸೇರಿದ್ದಾಗಿದೆ. ಹಿಂದಿನ ಕಾಲದ ಗ್ರಾಮೀಣ ಆಟಗಳು ಕೂಡ ಜಾನಪದ ಕಲೆಗಳೇ. ಅದನ್ನಿಂದು ಜಾನಪದ ಕ್ರೀಡೆಗಳು ಎಂದು ಕರೆಯಲಾಗುತ್ತಿದೆ. ವಿದ್ಯಾರ್ಥಿಗಳು ಜಾನಪದ ಕಲೆಗಳ ಬಗ್ಗೆ ಹೆಚ್ಚಿನ ಅಧ್ಯಯನ ನಡೆಸಿದಲ್ಲಿ ಪಿ.ಹೆಚ್.ಡಿ ಪದವಿಯನ್ನೂ ಕೂಡ ಗಳಿಸಲು ಸಾಧ್ಯ ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾಪೆÇೀಕ್ಲು ಕಸಾಪ ಘಟಕದ ಅಧ್ಯಕ್ಷ ಸಿ.ಎಸ್.ಸುರೇಶ್ ವಹಿಸಿದ್ದರು. ವೇದಿಕೆಯಲ್ಲಿ ಕಸಾಪ ಗೌರವಾಧ್ಯಕ್ಷ ಬೊಪ್ಪೇರ ಸಿ.ಕಾವೇರಪ್ಪ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕನ್ನಡದಲ್ಲಿ ವಿಷಯದಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿನಿಯರನ್ನು ಗೌರವಿಸಲಾಯಿತು.