ಗೋಣಿಕೊಪ್ಪಲು, ಸೆ.12: ಗೋಣಿಕೊಪ್ಪಲುವಿನ ಲಯನ್ಸ್ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಗೋಣಿಕೊಪ್ಪ ಲಯನ್ಸ್ ಕ್ಲಬ್ ವೀರಾಜಪೇಟೆ ತಾಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘ ಸಂಯುಕ್ತ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ಪಡೆದು ಸಾಧನೆ ಮಾಡಿದ ವೀರಾಜಪೇಟೆ ಕಾವೇರಿ ಪ್ರೌಢಶಾಲೆ, ವೀರಾಜಪೇಟೆ ಪ್ರಗತಿ ಶಾಲೆ, ವೀರಾಜಪೇಟೆ ಕೂರ್ಗ್‍ವ್ಯಾಲಿ ಶಾಲೆ, ಕಳತ್ಮಾಡು ಲಯನ್ಸ್ ಪ್ರೌಢಶಾಲೆ, ಅರ್ವತೋಕ್ಲು, ಸರ್ವದೈವತಾ ಪ್ರೌಢಶಾಲೆ, ಶ್ರೀಮಂಗಲ ಜೆಸಿ ಪ್ರೌಢಶಾಲೆ, ಟಿ.ಶೆಟ್ಟಿಗೇರಿ ರೂಟ್ಸ್, ಅಮ್ಮತ್ತಿ ನೇತಾಜಿ, ಮಾಯಮುಡಿ ಸರ್ಕಾರಿ ಪ್ರೌಢಶಾಲೆ, ದೇವಣಗೇರಿ ಬಿ.ಸಿ. ಪ್ರೌಢಶಾಲೆಗಳ ಮುಖ್ಯಶಿಕ್ಷರುಗಳನ್ನು ಇದೇ ಸಂದರ್ಭ ಸನ್ಮಾನಿಸಲಾಯಿತು.
ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ಲಯನ್ಸ್ ಶಾಲೆಯ ಅನುಷಾ ಕೆ.ಎಸ್. ಪೊನ್ನಮ್ಮ, ಡಿ.ಸಿಂಚನಾ, ಸಂತ ಅಂಥೋನಿಯ ಬಿ.ಡಿ. ಲಾಂಚನ ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆಯ ಬಿ.ಈ. ಜೀವಿತ, ವೀರಾಜಪೇಟೆ ಸೆಂಟ್ ಆನ್ಸ್ ಶಾಲೆಯ ಸಬೀನ್, ವೀರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲಾ ಬೀಳಗಿ, ಕ್ಷೇತ್ರ ಸಂಪನ್ಮೂಲ ಸಮನ್ವಯ ಅಧಿಕಾರಿ ವನಜಾಕ್ಷಿ ಅವರುಗಳನ್ನು ಸನ್ಮಾನಿಸಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲಾ ಬೀಳಗಿ ಮಾತನಾಡಿ, ಶಿಕ್ಷಣದ ಗುಣಮಟ್ಟ ಬದಲಾಗುತ್ತಿದ್ದರೂ, ಅಧಿಕಾರಿ, ಶಿಕ್ಷಕ ವರ್ಗ ಹಾಗೂ ಪೋಷಕರು ಆಗುತ್ತಿರುವ ಬದಲಾವಣೆಗೆ ಹೊಂದಿಕೊಂಡು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಮುಂದಾಗಬೇಕಿದೆ ಎಂದರು ಸಲಹೆ ನೀಡಿದರು. ಗೋಣಿಕೊಪ್ಪ ಲಯನ್ಸ್ ಕ್ಲಬ್ ಮುಖ್ಯಸ್ಥ ಕೊಡಂದೇರ ಚೆಂಗಪ್ಪ, ಸಂಸ್ಥೆ ಅಧ್ಯಕ್ಷ ಕೆ.ಪಿ. ಅಚ್ಚಯ್ಯ, ಕಾರ್ಯದರ್ಶಿ ಪುತ್ತಾಮನೆ ಸ್ಮರಣ್ ಶುಭಾಷ್, ತಾಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಲಾಲ್ ಕುಮಾರ್ ಇದ್ದರು.