ಕೂಡಿಗೆ, ಸೆ. 12: ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮ ಸಭೆಯು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಈ ವ್ಯಾಪ್ತಿಯಲ್ಲಿ ಕೈಗೊಂಡ ಉದ್ಯೋಗ ಖಾತರಿ ಮತ್ತು ಇತರ ಯೋಜನೆಯ ಕಾಮಗಾರಿಗಳ ಪರಿಶೀಲನೆ ಮತ್ತು ಲೆಕ್ಕ ಪತ್ರ ಮಂಡನೆ ಗ್ರಾಮ ಸಭೆ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಆಡಳಿತ ಅಧಿಕಾರಿಯಾದ ಕುಶಾಲನಗರ ಗಂಧದ ಕೋಟೆಯ ವಲಯ ಅರಣ್ಯ ಅಧಿಕಾರಿ ಶೀಮಾ ವಹಿಸಿದ್ದರು. ನೋಡಲ್ ಅಧಿಕಾರಿಯಾಗಿ ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಪಾಂಡು ಕಾರ್ಯನಿರ್ವಹಿಸಿದರು. ಸಭೆಗೆ ತಾಲೂಕು ರಾಷ್ಟ್ರೀಯ ಉದ್ಯೋಗ ಖಾತರಿ ಅಧಿಕಾರಿ ಪ್ರೀತಂ ಪೆÇನ್ನಪ್ಪ ಮಾಹಿತಿ ನೀಡಿದರು.
ಸಭೆಯಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಖೇಶ್ ಸೇರಿದಂತೆ ಸಿಬ್ಬಂದಿ ವರ್ಗದವರು ಮತ್ತು ಗ್ರಾಮಸ್ಥರು ಹಾಜರಿದ್ದರು.