ಕೂಡಿಗೆ, ಸೆ. 12: ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಮಡಿಕೇರಿ ಇವರ ವತಿಯಿಂದ ಬ್ಯಾಂಕಿನ ಹೆಬ್ಬಾಲೆ ಶಾಖೆಯ ಉದ್ಘಾಟನಾ ಕಾರ್ಯಕ್ರಮ ತಾ. 13 ರಂದು (ಇಂದು) ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ನೆರವೇರಿಸಲಿದ್ದಾರೆ. ನಗದು ಕೌಂಟರ್ನ ಉದ್ಘಾಟನೆಯನ್ನು ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ ನೆರವೇರಿಸಲಿದ್ದಾರೆ. ಭದ್ರತಾ ಕೊಠಡಿಯನ್ನು ಡಿಸಿಸಿ ಬ್ಯಾಂಕ್ನ ಉಪಾಧ್ಯಕ್ಷ ಕೇಟೋಳಿರ ಎಸ್. ಹರೀಶ್ ಪೂವಯ್ಯ ನೆರವೇರಿಸುವರು.
ಬೆಳಿಗ್ಗೆ ಗಣಪತಿ ಹೋಮ ಸೇರಿದಂತೆ ವಿವಿಧ ಪೂಜಾ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.