ಗುಡ್ಡೆಹೊಸೂರು, ಸೆ. 12: ಫೆಡರೇಷನ್ ಆಫ್ ಎಜುಕೇಶನ್ ಹೈದರಾಬಾದ್ ಮತ್ತು ಐ.ಟಿ.ಸಿ ಕಂಪನಿ ಸಹಭಾಗಿತ್ವದಲ್ಲಿ ಮಹಿಳೆಯರ ಸಶಕ್ತತೆಯಿಂದ ಮತ್ತು ಸ್ವ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ತರಬೆÉೀತಿ ಕಾರ್ಯಕ್ರಮ ಕರ್ನಾಟಕ ರಾಜ್ಯದಲ್ಲಿ ಅನುಷ್ಠಾನವಾಗುತ್ತಿದೆ. ಈ ಕಾರ್ಯಕ್ರಮದ ಅಂಗವಾಗಿ ಗುಡ್ಡೆಹೊಸೂರಿನ ಸಮುದಾಯ ಭವನದಲ್ಲಿ ಸಮಾರಂಭ ಏರ್ಪಡಿಸಲಾಗಿತ್ತು. ಪ್ರಾರಂಭದಲ್ಲಿ 15 ಜಿಲ್ಲೆಗಳಲ್ಲಿ ಮಹಿಳೆಯರ ಕೌಶಲ್ಯ ಗುರುತಿಸಿ ತರಬೇತಿ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.
ಕಾರ್ಯಕ್ರಮದಲ್ಲಿ ರಾಜ್ಯ ಸಂಯೋಜಕ ಶಂಕರ್, ಚಿತ್ರದುರ್ಗ ಜಿಲ್ಲಾ ಸಂಯೋಜಕ ಕೃಷ್ಣಮೂರ್ತಿ, ಗ್ರಾ.ಪಂ. ಮಾಜಿ ಅಧ್ಯಕ್ಷೆ ಕೆ.ಎಸ್. ಭಾರತಿ, ಮಾಜಿ ಸದಸ್ಯ ಬಿ.ಟಿ. ಪ್ರಸನ್ನ ಮತ್ತು 50ಕ್ಕೂ ಹೆಚ್ಚು ಶಿಬಿರಾರ್ಥಿಗಳು ಭಾಗವಹಿಸಿದ್ದರು. ಈ ಸಂದÀರ್ಭ ಸಂಯೋಜಕ ಕೃಷ್ಣಮೂರ್ತಿ ಮಾತನಾಡಿ ಕಾರ್ಯಕ್ರಮದ ಉದ್ದೇಶ ಮತ್ತು ಅನುಕೂಲದ ಬಗ್ಗೆ ವಿವರಿಸಿದರು. ವೈಶಾಲಿ ಮತ್ತು ತಂಡ ಪ್ರಾರ್ಥಿಸಿದರೆ, ಲತಾ ಸ್ವಾಗತಿಸಿದರು. ಜಿಲ್ಲಾ ಸಂಯೋಜಕಿ ವಿಜಯಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು.