ಮಡಿಕೇರಿ, ಸೆ. 12: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 2019-20ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ.ಯಲ್ಲಿ ಕನ್ನಡ ಭಾಷಾ ವಿಷಯದಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಗೌರವ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ತಾ. 18 ರಂದು ಬೆಳಿಗ್ಗೆ 10.30 ಗಂಟೆಗೆ ಮರಗೋಡು ಭಾರತಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್‍ನ ಮೂರ್ನಾಡು ಹೋಬಳಿ ಘಟಕದ ಅಧ್ಯಕ್ಷ ಸುಕುಮಾರ್ ವಹಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಲೋಕೇಶ್ ಸಾಗರ್ ಅವರು ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಕ.ಸಾ.ಪ. ಮಡಿಕೇರಿ ತಾಲೂಕು ಅಧ್ಯಕ್ಷ ಕುಡೆಕಲ್ ಸಂತೋಷ್, ಭಾರತಿ ವಿದ್ಯಾಸಂಸ್ಥೆಯ ಅಧ್ಯಕ್ಷ ಕಟ್ಟೇಮನೆ ಸೋನಾಜಿತ್, ಸಾಹಿತಿ ಕಿಗ್ಗಾಲು ಗಿರೀಶ್ ಹಾಗೂ ಜಿಲ್ಲಾ ಕ.ಸಾ.ಪ. ಕಾರ್ಯದರ್ಶಿ ಡಾ. ಸುಭಾಷ್ ನಾಣಯ್ಯ ಭಾಗವಹಿಸಲಿದ್ದಾರೆ.