ಕೂಡಿಗೆ, ಸೆ. 13: ಇಲ್ಲಿಗೆ ಸಮೀಪದ ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಚಿಕ್ಕ ಅಳವಾರದಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದ ಆವರಣದಲ್ಲಿ ತಾ. 14 ರಂದು (ಇಂದು) ಪರಿಸರ ದಿನಾಚರಣೆ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪೆÇ್ರ.ಪಿ ಸುಬ್ರಹ್ಮಣ್ಯ ಯಡಪಡಿತಾಯ ಅವರಿಗೆ ಅಭಿನಂದನಾ ಕಾರ್ಯಕ್ರಮ ನೆಡೆಯಲಿವೆ.

ಕಾರ್ಯಕ್ರಮದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಡಾ. ಪಾರ್ವತಿ ಅಪ್ಪಯ್ಯ ಅವರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.