ಸಿದ್ದಾಪುರ, ಸೆ. 16: ಆದಿವಾಸಿಗಳಿಗೆ ಸರಕಾರದ ವತಿಯಿಂದ ನೀಡುತ್ತಿರುವ ಪೌಷ್ಟಿಕ ಆಹಾರ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಆದಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ ಮಾಲ್ದಾರೆ ಸಮೀಪದ ದಿಡ್ಡಳ್ಳಿ ಗ್ರಾಮದಲ್ಲಿ ವಾಸ ಮಾಡಿಕೊಂಡಿರುವ ಆದಿವಾಸಿಗಳಿಗೆ ಸರಕಾರದ ವತಿಯಿಂದ ಐಟಿಡಿಪಿ ಇಲಾಖೆಯ ಮೂಲಕ ನೀಡುತ್ತಿರುವ ಪೌಷ್ಟಿಕ ಆಹಾರ ಕಳಪೆ ಗುಣಮಟ್ಟ ದಿಂದ ಕೂಡಿದ್ದು ಆಹಾರವನ್ನು ಸೇವಿಸಲು ಸಾಧ್ಯವಾಗುತ್ತಿಲ್ಲ ಎಂದು ಆದಿವಾಸಿಗಳು ಇಲಾಖಾಧಿಕಾರಿಗಳ ವಿರುದ್ಧ ಆಕ್ರೋಶ ಪಡಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಆದಿವಾಸಿ ಹೋರಾಟಗಾರ್ತಿ ಜೆ.ಕೆ. ಮುತ್ತಮ್ಮ, ಕಳೆದ ಕೆಲವು ತಿಂಗಳಿನಿಂದ ಐಟಿಡಿಪಿ ಇಲಾಖೆ ವತಿಯಿಂದ ಆದಿವಾಸಿಗಳಿಗೆ ನೀಡುತ್ತಿರುವ ಪೌಷ್ಟಿಕ ಆಹಾರ ಅಕ್ಕಿ, ಹುರುಳಿಕಾಳು, ಕಡಲೆಬೀಜ, ಅಲಸಂಡೆ ಬೀಜಗಳು ಕಳಪೆ ಗುಣಮಟ್ಟದಿಂದ ಕೂಡಿವೆ. ಈ ಬಗ್ಗೆ ಸಂಬಂಧಪಟ್ಟ ಇಲಾಖಾಧಿಕಾರಿ ಗಳಿಗೆ ಹಲವಾರು ಬಾರಿ ದೂರು ನೀಡಿದ್ದರೂ ಕೂಡ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ದ್ದಾರೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಹಾಗೂ ಜಿಲ್ಲಾಡಳಿತಕ್ಕೆ ದೂರು ನೀಡಲಾಗುವುದು ಎಂದು ಮುತ್ತಮ್ಮ ತಿಳಿಸಿದ್ದಾರೆ. ಇಲಾಖೆ ವತಿಯಿಂದ ನೀಡುತ್ತಿರುವುದು ಸರಿಯಾದ ಕ್ರಮವಲ್ಲ ಎಂದು ತಿಳಿಸಿದರು.