ಮಡಿಕೇರಿ, ಸೆ. 16: ವೀರಾಜಪೇಟೆ ತಾಲೂಕಿನ ಬಾಡಗರಕೇರಿ ಗ್ರಾಮದಲ್ಲಿ ಬಾಲಕಾರ್ಮಿಕರಾಗಿ ದುಡಿಯುತ್ತಿದ್ದ ನಾಲ್ಕು ಮಕ್ಕಳನ್ನು ಪೆÇಲೀಸ್ ಇಲಾಖೆಯ ಮಕ್ಕಳ ವಿಶೇಷ ಪೆÇಲೀಸ್ ಘಟಕ ಹಾಗೂ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಪತ್ತೆ ಹಚ್ಚಿ ಮಕ್ಕಳನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಿ ಸರಕಾರಿ ಬಾಲಮಂದಿರದಲ್ಲಿ ದಾಖಲಿಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಪೆÇಲೀಸ್ ಇಲಾಖೆಯ ಮಕ್ಕಳ ವಿಶೇಷ ಘಟಕದ ಸಿಬ್ಬಂದಿಯಾದ ಶ್ರೀಮತಿ ಎಂ.ಬಿ. ಸುಮತಿ ಹಾಗೂ ಇತರೆ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಯವರು ಭಾಗಿಯಾಗಿದ್ದರು.

ಅಪ್ರಾಪ್ತ ಮಕ್ಕಳನ್ನು ಬಾಲ ಕಾರ್ಮಿಕರಾಗಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು ಅಂತಹ ಕೃತ್ಯಗಳು ಕಂಡು ಬಂದಲ್ಲಿ ಸಾರ್ವಜನಿಕರು ಕೂಡಲೇ 1098 ಮಕ್ಕಳ ಸಹಾಯವಾಣಿ ಸಂಖ್ಯೆ ದೂರವಾಣಿ ಮೂಲಕ ಕರೆ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.