ಗೋಣಿಕೊಪ್ಪ ವರದಿ, ಸೆ. 17: ಮೋದಿ ಹುಟ್ಟುಹಬ್ಬ ಪ್ರಯುಕ್ತ ಬಿಜೆಪಿ ಆಯೋಜಿಸಿರುವ ಸೇವಾ ಸಪ್ತಾಹ ಕಾರ್ಯಕ್ರಮದಡಿ ವೀರಾಜಪೇಟೆ ತಾಲೂಕು ಬಿಜೆಪಿ ಯುವ ಮೋರ್ಚಾ ವತಿಯಿಂದ ತಾ.18 ರಂದು ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ.
ಬೆಳಿಗ್ಗೆ 10 ಗಂಟೆಯಿಂದ ರಕ್ತದಾನ ನಡೆಯಲಿದೆ. ದಾನಿಗಳು ಸ್ವಯಂ ಆಸಕ್ತಿಯಿಂದ ರಕ್ತದಾನ ಮಾಡಬಹುದಾಗಿದೆ ಎಂದು ಬಿಜೆಪಿ ತಾಲೂಕು ಯುವ ಮೋರ್ಚ ಅಧ್ಯಕ್ಷ ಸೋಮೆಯಂಡ ಕವನ್ ಕಾರ್ಯಪ್ಪ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 9480132515 ಸಂಪರ್ಕಿಸಬಹುದಾಗಿದೆ.