ಮಡಿಕೇರಿ, ಸೆ. 17: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕುಶಾಲನಗರದಲ್ಲಿ ಆಯೋಜಿಸಿದ್ದ 11 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆರ್ಥಿಕ ಸಮಿತಿ ಅಧ್ಯಕ್ಷರಾಗಿದ್ದ ನರಸಿಂಹ ಮೂರ್ತಿ ಅವರ ನಿಧನಕ್ಕೆ ಕಸಾಪ ವತಿಯಿಂದ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಶ್ರದ್ಧಾಂಜಲಿ ಸಭೆಯಲ್ಲಿ ಕುಶಾಲನಗರ ತಾಲೂಕು ಕಸಾಪ ಅಧ್ಯಕ್ಷ ಎಂ. ಡಿ. ರಂಗಸ್ವಾಮಿ, ಕಾರ್ಯದರ್ಶಿಗಳಾದ ಎನ್.ಆರ್. ನಾಗೇಶ್, ಅಕ್ಷರ ಹರೀಶ್, ಖಜಾಂಚಿ ನಾಗೇಗೌಡ ಇದ್ದರು.