ಕೂಡಿಗೆ, ಸೆ. 17: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮದಲ್ಲಿರುವ ದಿಡ್ಡಳ್ಳಿ ಪುನರ್ವಸತಿ ಕೇಂದ್ರದಲ್ಲಿರುವ ಹಾಡಿಗೆ ಹೋಗುವ ಮುಖ್ಯ ರಸ್ತೆಯು ತೀರಾ ಹಾಳಾಗಿದ್ದು, ಕೇಂದ್ರದ ಒಳಗಡೆಗೆ ಹೋಗಲು ಸಾದ್ಯವಾಗುತ್ತಿಲ್ಲ, ರಸ್ತೆಗೆ ಗ್ರಾಮ ಪಂಚಾಯಿತಿ ವತಿಯಿಂದ ಮಣ್ಣು ಸುರಿದು ಕೆಸರುಮಯವಾಗಿದೆ. ರಸ್ತೆ ದುರಸ್ತಿಪಡಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಬ್ಯಾಡಗೊಟ್ಟ ಹಾಡಿಯಲ್ಲಿ ಈಗಾಗಲೇ 256ಕ್ಕೂ ಹೆಚ್ಚು ಕುಟುಂಬ ವಾಸಿಸುತ್ತಿದ್ದು, ಆ ಕುಟುಂಬದ ಮಕ್ಕಳು ಮತ್ತು ಮಹಿಳೆಯರು ತಿರುಗಾಡಲು ತೊಂದರೆ ಆಗುತ್ತಿದೆ ಎಂದು ಅಪ್ಪು, ಶಂಕರ್, ಮುತ್ತ ಸೇರಿದಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.