ಮಡಿಕೇರಿ, ಸೆ. 17: ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ವತಿಯಿಂದ ಮಹಿಳಾ ಕಾಂಗ್ರೆಸ್ ಸಂಸ್ಥಾಪನಾ ದಿನವನ್ನು ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು.
ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪಕ್ಷ ಸಂಘಟನೆಯಲ್ಲಿ ಮಹಿಳೆಯರು ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ಕರೆ ನೀಡಿದರು.
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪ ಅಮರನಾಥ್ ಸೂಚನೆಯಂತೆ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಮಹಿಳಾ ಘಟಕವನ್ನು ಬೂತ್ ಮಟ್ಟದಿಂದಲೇ ಬಲಿಷ್ಠಗೊಳಿಸಲಾಗುವುದು ಎಂದರು. ಹಿರಿಯ ಮುಖಂಡ ಟಿ.ಪಿ. ರಮೇಶ್ ಮಾತನಾಡಿ, ಮಹಿಳೆಯರು ರಾಜಕೀಯವಾಗಿ ಗುರುತಿಸಿಕೊಳ್ಳಬೇಕೆಂದು ಕರೆ ನೀಡಿದರು.
ನಗರ ಕಾಂಗ್ರೆಸ್ ಅಧ್ಯಕ್ಷ ಕೆ.ಯು. ಅಬ್ದುಲ್ ರಜಾಕ್, ಪ್ರಧಾನ ಕಾರ್ಯದರ್ಶಿ ಎ.ಪಿ. ಚಂದ್ರಶೇಖರ್, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಫ್ಯಾನ್ಸಿ ಪಾರ್ವತಿ, ಸೇವಾದಳದ ಹೆಚ್.ಕೆ. ಪ್ರೇಮ, ಪ್ರಮುಖರಾದ ಮುಮ್ತಾಜ್ ಬೇಗ್, ಶಶಿ, ವೀಣಾ ಶ್ರೀಧರ್, ನಗರಸಭೆ ಮಾಜಿ ಸದಸ್ಯ ಪ್ರಕಾಶ್ ಆಚಾರ್ಯ, ಕಚೇರಿ ಸಿಬ್ಬಂದಿಗಳಾದ ರಾಣಿ, ಉಷಾ ಮತ್ತಿತರರು ಹಾಜರಿದ್ದರು. ಪ್ರಧಾನ ಕಾರ್ಯದರ್ಶಿ ಮಿನಾಜ್ ಪ್ರವೀಣ್ ಸ್ವಾಗತಿಸಿ, ನಗರಸಭೆ ಮಾಜಿ ಸದಸ್ಯೆ ತಜಸ್ಸುಂ ವಂದಿಸಿದರು. ಸಭಾ ಕಾರ್ಯಕ್ರಮಕ್ಕೂ ಮೊದಲು ಸುರಯ್ಯ ಅಬ್ರಾರ್ ಧ್ವಜಾರೋಹಣ ನೆರವೇರಿಸಿದರು.