ಮಡಿಕೇರಿ, ಸೆ.17: ಸೋಮವಾರಪೇಟೆ ತಾಲೂಕು ಕೂಡಿಗೆ ಕ್ರೀಡಾಶಾಲೆಯ ಮುಖ್ಯ ಶಿಕ್ಷಕರಾದ ಕುಂತಿ ಬೋಪಯ್ಯ ಅವರು 2020-21 ನೇ ಸಾಲಿನ ಪ್ರೌಢಶಾಲಾ ವಿಭಾಗದಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾಗಿದ್ದು, ಸೆಪ್ಟೆಂಬರ್ 5 ರಂದು ಸಂತ ಮೈಕಲರ ಶಾಲೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗದಿರುವ ಹಿನ್ನೆಲೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕÀ ಪಿ.ಎಸ್. ಮಚ್ಚಾಡೊ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್.ಗಾಯತ್ರಿ ಹಾಗೂ ಕಚೇರಿಯ ಅಧಿಕಾರಿ ವೃಂದದವರಿಂದ ಬುಧವಾರ (ಸೆ.16) ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ರವಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ವೆಂಕಟೇಶ್, ಶಿಕ್ಷಕರಾದ ರೇವತಿ ರಮೇಶ್, ಇತರರು ಇದ್ದರು.