ಸಂಪಾಜೆ, ಸೆ. 18: ಕನ್ನಡ ಸಾಹಿತ್ಯ ಪರಿಷತ್ ಸಂಪಾಜೆ ಹೋಬಳಿ ಘಟಕದ ವತಿಯಿಂದ 2019-20ನೇ ಸಾಲಿನ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಪರೀಕ್ಷೆಯ ಕನ್ನಡ ಭಾಷಾ ವಿಷಯದಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಗೌರವ ಪುರಸ್ಕಾರ ಕಾರ್ಯಕ್ರಮ ತಾ. 19 ರಂದು (ಇಂದು) ಸಂಪಾಜೆಯ ಪಯಶ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ ಹೋಬಳಿ ಘಟಕದ ಅಧ್ಯಕ್ಷ ಎನ್.ಸಿ. ಅನಂತ್ ವಹಿಸಲಿದ್ದು, ಉದ್ಘಾಟನೆಯನ್ನು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ನೆರವೇರಿಸಲಿದ್ದಾರೆ. ಅತಿಥಿಗಳಾಗಿ ಮಡಿಕೇರಿ ತಾಲೂಕು ಕ.ಸಾ.ಪ. ಅಧ್ಯಕ್ಷ ಕುಡೆಕಲ್ ಸಂತೋಷ್, ಅರೆಭಾಷಾ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಎನ್.ಎಸ್. ದೇವಿಪ್ರಸಾದ್, ಮಡಿಕೇರಿ ಸರಕಾರಿ ಪದವಿಪೂರ್ವ ಕಾಲೇಜು ಸಹಾಯಕ ಪ್ರಾಧ್ಯಾಪಕ ಡಾ. ಕೆ.ಸಿ. ದಯಾನಂದ ಭಾಗವಹಿಸಲಿದ್ದಾರೆ.