*ಸಿದ್ದಾಪುರ: ವಾಲ್ನೂರು- ತ್ಯಾಗತ್ತೂರು ಗ್ರಾ.ಪಂ. ಜಮಾಬಂದಿ ಸಭೆ ತಾ. 22 ರಂದು ಬೆಳಿಗ್ಗೆ 11 ಗಂಟೆಗೆ ಸ್ಥಳೀಯ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಲಿದೆ.
ಪಂಚಾಯಿತಿ ಆಡಳಿತಾಧಿಕಾರಿ ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಕೆ. ಪಾಂಡು ಹಾಗೂ ನೋಡಲ್ ಅಧಿಕಾರಿ ಡಾ. ಸಂಜೀವ್ ಕುಮಾರ್ ಆರ್. ಶಿಂಧೆ ಅವರ ಉಪಸ್ಥಿತಿಯಲ್ಲಿ ಸಭೆ ನಡೆಯಲಿದೆ.
ಕೂಡಿಗೆ: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ. 2019-20ನೇ ಸಾಲಿನ ಜಮಾಬಂದಿ ಕಾರ್ಯಕ್ರಮ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮದ ನೋಡಲ್ ಅಧಿಕಾರಿಯಾಗಿ ತಾಲೂಕು ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಹೇಮಂತ್ ಕುಮಾರ ಭಾಗವಹಿಸಲಿದ್ದು, ಗ್ರಾಮ ಪಂಚಾಯಿತಿ ಅಡಳಿತ ಅಧಿಕಾರಿ ವರದ ಆಗಮಿಸಲಿದ್ದಾರೆ.
ಸಿದ್ದಾಪುರ: ಬಿಳುಗುಂದ ಗ್ರಾ.ಪಂ. ವ್ಯಾಪ್ತಿಗೆ ಒಳಪಡುವ ಜಮಾಬಂದಿ ಸಭೆಯು ತಾ. 22 ರಂದು ಪೂರ್ವಾಹ್ನ 11 ಗಂಟೆಗೆ ಬಿಳುಗುಂದ ಗ್ರಾ.ಪಂ. ಕಚೇರಿಯಲ್ಲಿ ನಡೆಯಲಿದೆ. ಪಂಚಾಯಿತಿ ಆಡಳಿತ ಅಧಿಕಾರಿಗಳಾದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಎಂ.ಇ. ಸುರೇಶ್ ಹಾಗೂ ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲ ಸಾರಿಗೆ ಉಪ ವಿಭಾಗದ ಅಧಿಕಾರಿಗಳ ಸಮ್ಮುಖದಲ್ಲಿ ಸಭೆ ನಡೆಯಲಿದೆ.