ಕೂಡಿಗೆ, ಸೆ. 18: ಕಾವೇರಿ ನೀರಾವರಿ ನಿಗಮದ ಮೂಲಕ ರಾಜ್ಯ ಸರಕಾರದ ಮುಖೇನ ಕೇಂದ್ರ ಸರ್ಕಾರದ ಮೂಲಕ ಜಿಲ್ಲೆಯ ಕುಶಾಲನಗರ ದಿಂದ ಕೂಡಿಗೆವರೆಗೆ ಕಾವೇರಿ ನದಿಯ ತಗ್ಗುಪ್ರದೇಶಗಳಲ್ಲಿ ನೀರು ನುಗ್ಗಿ ಬಹಳಷ್ಟು ಪ್ರದೇಶಗಳಲ್ಲಿ ಮನೆಗಳಿಗೆ ನೀರು ಬಂದು ಹಾನಿಗೊಳಗಾದ ಹಿನ್ನೆಲೆ ಕಾವೇರಿ ನದಿ ತಗ್ಗು ಪ್ರದೇಶಗಳಲ್ಲಿ ರಕ್ಷಣಾ ತಡೆಗೋಡೆ ನಿರ್ಮಾಣ ಮಾಡಲು ನೀರಾವರಿ ಇಲಾಖೆಯ ವತಿಯಿಂದ ಕೇಂದ್ರ ಸರ್ಕಾರಕ್ಕೆ ರೂ. 100 ಕೋಟಿ ವೆಚ್ಚದ ಕ್ರಿಯಾ ಯೋಜನೆಯನ್ನು ಸಿದ್ಧಮಾಡಿ ಕಳುಹಿಸಲಾಗಿದೆ. ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರ ಸೂಚನೆಯ ಮೇರೆಗೆ ಕಾವೇರಿ ನೀರಾವರಿ ನಿಗಮದ ಮೂಲಕ ರಾಜ್ಯ ಸರ್ಕಾರಕ್ಕೆ ಮತ್ತು ಕೇಂದ್ರ ಸರ್ಕಾರಕ್ಕೆ ರೂ. 100 ಕೋಟಿ ವೆಚ್ಚದಲ್ಲಿ ಕಾಮಗಾರಿಯನ್ನು ಕೈಗೊಳ್ಳಲು ರಾಜ್ಯ ಸರ್ಕಾರದ ಮೂಲಕ ಕೇಂದ್ರಕ್ಕೆ ಪ್ರಸ್ತಾವನೆಯಲ್ಲಿ ಕಳುಹಿಸಲಾಗಿದೆ.