ಕುಶಾಲನಗರ, ಸೆ. 18: ಕುಶಾಲನಗರ ಕಾಂಗ್ರೆಸ್ ಘಟಕದ ವತಿಯಿಂದ ನಿಧನರಾದ ಕಾಂಗ್ರೆಸ್ ಮುಖಂಡ ಎಸ್.ಎನ್. ನರಸಿಂಹ ಮೂರ್ತಿ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಕುಶಾಲನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ನರಸಿಂಹ ಮೂರ್ತಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಷನೆ ಮಾಡಿದರು. ಒಂದು ನಿಮಿಷಗಳ ಕಾಲ ಮೌನಾಚರಣೆ ಮೂಲಕ ಅಗಲಿದ ಆತ್ಮಕ್ಕೆ ಶಾಂತಿ ಕೋರಲಾಯಿತು.
ಈ ಸಂದರ್ಭ ಮಾತನಾಡಿದ ಮೃತರ ಒಡನಾಡಿಗಳು ಹಾಗೂ ಕಾಂಗ್ರೆಸ್ ಮುಖಂಡರುಗಳಾದ ಫಜಲುಲ್ಲ, ಪ್ರಮೋದ್ ಮುತ್ತಪ್ಪ, ಅಬ್ದುಲ್ ಖಾದರ್, ಎಸ್.ಎನ್. ನರಸಿಂಹ ಮೂರ್ತಿ ಅವರು ಕುಶಾಲನಗರಕ್ಕೆ ನೀಡಿದ ಕೊಡುಗೆಗಳು ಮತ್ತು ಅವರ ಸಾಧನೆಗಳ ಬಗ್ಗೆ ಮೆಲುಕು ಹಾಕಿದರು.
ಶ್ರದ್ಧಾಂಜಲಿ ಸಭೆಯಲ್ಲಿ ಕುಡಾ ಮಾಜಿ ಅಧ್ಯಕ್ಷ ಮಂಜುನಾಥ್ ಗುಂಡುರಾವ್, ಕಾಂಗ್ರೆಸ್ ನಗರ ಘಟಕ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಶಿವಶಂಕರ್, ಪ.ಪಂ. ಸದಸ್ಯರಾದ ಸುಂದರೇಶ್, ಪ್ರಮುಖರಾದ ನಂಜುಂಡಸ್ವಾಮಿ ಮತ್ತಿತರರು ಇದ್ದರು.
ನಾಗರಿಕ ವೇದಿಕೆ ಸಂತಾಪ
ಕುಶಾಲನಗರ ನಾಗರಿಕ ವೇದಿಕೆ ವತಿಯಿಂದ ಎಸ್.ಎನ್. ನರಸಿಂಹ ಮೂರ್ತಿ ಅವರಿಗೆ ನುಡಿ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕುಶಾಲನಗರದ ಕನ್ನಿಕಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೆರೆದಿದ್ದ ಗಣ್ಯರು ನರಸಿಂಹ ಮೂರ್ತಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಮೌನಚಾರಣೆ ಮೂಲಕ ಮೃತರ ಆತ್ಮಕ್ಕೆ ಶಾಂತಿ ಕೋರಲಾಯಿತು.
ಈ ಸಂದರ್ಭ ಹಿರಿಯ ವಕೀಲ ಹೆಚ್.ಎಸ್. ಚಂದ್ರಮೌಳಿ, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರಾದ ವಿ.ಪಿ. ಶಶಿಧರ್, ಜಿ.ಎಲ್. ನಾಗರಾಜ್, ವಿ.ಡಿ. ಪುಂಡರೀಕಾಕ್ಷ, ಬಿ.ಆರ್. ನಾಗೇಂದ್ರಪ್ರಸಾದ್, ಎಂ.ವಿ. ನಾರಾಯಣ್, ಎಸ್.ಕೆ. ಸತೀಶ್ ಮತ್ತಿತರರು ಇದ್ದರು.