ಮಡಿಕೇರಿ, ಸೆ. 18: ಕೊಡಗು ಜಿಲ್ಲೆ ಸೇರಿದಂತೆ ಮಲೆನಾಡು ಭಾಗಗಳಲ್ಲಿ ಮಳೆ ಹೆಚ್ಚಾಗುವ ಸಂಭವವಿದ್ದು, ಜಿಲ್ಲೆಯಲ್ಲಿ ವ್ಯಾಪಕವಾಗಿ ಗುಡುಗು ಸಹಿತ ಸಾಧಾರಣದಿಂದ ಭಾರೀ ಮಳೆಯಾಗುವ ಸಂಭವವಿದೆ.

ಜಿಲ್ಲೆಗೆ ತಾ. 19 ರಿಂದ ತಾ. 21ರ ಬೆಳಿಗ್ಗೆ 8.30 ರವರೆಗೆ ಆರೆಂಜ್ ಅಲರ್ಟ್ ಮತ್ತು ತಾ. 21 ರ ಬೆಳಿಗ್ಗೆಯಿಂದ ತಾ. 22ರ ಬೆಳಿಗ್ಗೆವರೆಗೆ ರೆಡ್ ಅಲರ್ಟ್‍ನ್ನು ಭಾರತೀಯ ಹವಾಮಾನ ಇಲಾಖೆ ಘೋಷಿಸಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದಿರಲು ಜಿಲ್ಲಾಡಳಿತ ಮನವಿ ಮಾಡಿದೆ.

ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ. ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ : 24ಘಿ 7 ಕಂಟ್ರೋಲ್ ರೂಂ: 08272- 221077 ತಿhಚಿಣsಚಿಠಿಠಿ ಓo:8550001077 ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.