ಮಡಿಕೇರಿ, ಸೆ. 19: ಅಕ್ರಮವಾಗಿ ಜೂಜಾಡುತ್ತಿದ್ದ ಪ್ರಕರಣವನ್ನು ಬೇಧಿಸಿದ ಪೊಲೀಸರು ಹಾಗೂ ಜಿಲ್ಲಾ ಅಪರಾಧ ಪತ್ತೆದಳದ ತಂಡದವರು 7 ಮಂದಿಯನ್ನು ಬಂಧಿಸಿ ಪಣಕ್ಕಿಟ್ಟಿದ್ದ ನಗದನ್ನು ವಶಪಡಿಸಿಕೊಂಡಿದ್ದಾರೆ.
ಇಲ್ಲಿಗೆ ಸಮೀಪದ ಮರಗೋಡು ಬಳಿಯ ಹೊಸ್ಕೇರಿ ಗ್ರಾಮದ ಎಂ.ಕೆ. ಗಣೇಶ್ ಅವರ ಮನೆಯ ಬಳಿ ಜೂಜಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಹಾಗೂ ಕೊಡಗು ಜಿಲ್ಲಾ ಅಪರಾಧ ಪತ್ತೆದಳದ ಸಿಬ್ಬಂದಿಗಳು ಜೂಜಾಡುತ್ತಿದ್ದ 7 ಮಂದಿಯನ್ನು ಬಂಧಿಸಿ ಪಣಕ್ಕಿಟ್ಟಿದ್ದ ರೂ. 44,120 ಹಣವನ್ನು ವಶಪಡಿಸಿ ಕೊಂಡಿದ್ದಾರೆ. ಮಡಿಕೇರಿ ಗ್ರಾಮಾಂತರ ಠಾಣಾಧಿಕಾರಿ ಹಾಗೂ ಅಪರಾಧ ಪತ್ತೆದಳದ ನಿರೀಕ್ಷಕ ಚಂದ್ರಶೇಖರ್ ಅವರ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಗ್ರಾಮಾಂತರ ಠಾಣಾ ಸಿಬ್ಬಂದಿಗಳು, ಅಪರಾಧ ಪತ್ತೆದಳದ ಸಿಬ್ಬಂದಿಗಳು ಹಾಗೂ ಚೆಟ್ಟಳ್ಳಿ ಉಪಠಾಣಾ ಸಿಬ್ಬಂದಿಗಳು ಭಾಗವಹಿಸಿದ್ದರು.
ಈ ಸಂಬಂಧ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.