ಸೋಮವಾರಪೇಟೆಯ ಚೌಡ್ಲು ಗ್ರಾಮದ ಗಾಂಧಿನಗರ ನಿವಾಸಿ ಬಿ.ಎನ್. ಗೌರಮ್ಮ (86) ಅವರು ತಾ. 19 ರಂದು ನಿಧನರಾದರು. ಮೃತರು ಮೂವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
*ವೀರಾಜಪೇಟೆ ತೆಲುಗರ ಬೀದಿ ನಿವಾಸಿ ನಗರದ ಈರುಳ್ಳಿ-ಆಲೂಗಡ್ಡೆ ಸಗಟು ವ್ಯಾಪಾರಿ ಟಿ.ಕೆ. ಕಾವೇರಿ ಶೆಟ್ಟಿ (54) ತಾ. 19ರಂದು ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
*ವೀರಾಜಪೇಟೆ ಸೈಂಟ್ ಆನ್ಸ್ ವಿದ್ಯಾಸಂಸ್ಥೆಯಲ್ಲಿ ದೀರ್ಘಕಾಲ ಉರ್ದು ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದ ಸಯ್ಯದ್ ಸೈಫುಲ್ಲಾ (71) ತಾ.18 ರಂದು ಬೆಂಗಳೂರಿನಲ್ಲಿ ನಿಧನರಾದರು. ಮೃತರು ಪತ್ನಿ, ಮೂವರು ಪುತ್ರರು ಹಾಗೂ ಈರ್ವರು ಪುತ್ರಿಯರನ್ನು ಅಗಲಿದ್ದಾರೆ.